....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಲೈಂಗಿಕ ಕಿರುಕುಳ ಪ್ರಕರಣ: ಇನ್ಸ್‌ಪೆಕ್ಟರ್ ಸಂದೇಶ್’ಗೆ ಬಿಗ್ ಶಾಕ್; ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು: ಅಮಾನತು ಕ್ರಮದ ಬೆನ್ನಲ್ಲೇ ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿಕ್ಷಕಿ ಮೇಲಿನ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ನೀಡಿದ ದೂರಿನ ಪ್ರಕಾರ, 2018ರಿಂದ 2023ರವರೆಗೆ ಹಲವು ಬಾರಿ ಮನೆಗೆ ಬಂದು ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ 376(2)(a)(1), 376(2)(n), 384 ಹಾಗೂ 506 ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದಕ್ಕೂ ಮುನ್ನ ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪಗಳು ಸುಳ್ಳು ಎಂದು ಪೊಲೀಸ್ ವರದಿ ತಿಳಿಸಿತ್ತು. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಕೂಡ ಈ ಆರೋಪಗಳು ಪ್ರೇರಿತವಾಗಿವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಹೊಸ ಅತ್ಯಾಚಾರ ದೂರು ದಾಖಲಾಗಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದಂತಾಗಿದೆ.

No Comments

Leave A Comment