....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ

ಶಿಮ್ಲಾ, ಮಾರ್ಚ್​ 22: ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮಂಡಿ ಜಿಲ್ಲೆಯ ಕೋಟ್ಲಿ ಹಳ್ಳಿಯಲ್ಲಿ ಭೂಕುಸಿತ ಉಂಟಾಗಿದೆ. ಬಂಡೆ, ಮಣ್ಣು ಎಲ್ಲವೂ ರಸ್ತೆಗೆ ಅಡ್ಡವಾಗಿ ಬಿದ್ದಿವೆ.

ಎರಡು ದಿನಗಳ ಹಿಂದಷ್ಟೇ ಕುಲ್ಲುವಿನ ಪಾರ್ವತಿ ಕಣಿವೆಯಲ್ಲಿ, ಘಾಟಿಗಢದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದರಿಂದ ಮಣಿಕರಣ್-ಬರ್ಶೈನಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಜಚ್ನಿಯಲ್ಲಿ ಮಣ್ಣು ಕುಸಿತ ಸಂಭವಿಸಿ ಭುಂತರ್-ಮಣಿಕರಣ್ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸಂಪರ್ಕ ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದೀಗ ಕೋಟ್ಲಿಯಲ್ಲೂ ಇಂಥದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ.

No Comments

Leave A Comment