.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ
ಬಳ್ಳಾರಿ, ಮಾರ್ಚ್ 26: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯದ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಅಬ್ದುಲ್ ಸಲಾಮ್ (36) ರಾಜ್ಯದಲ್ಲಿ ಅರೆಸ್ಟ್ ಆಗಿರುವ ಆರೋಪಿ. ಕರ್ನಾಟಕ ಸೇರಿದಂತೆ ಆಂಧ್ರ, ಬಿಹಾರ, ಮಹಾರಾಷ್ಟ್ರ ಒಳಗೊಂಡು ವಿವಿಧ ರಾಜ್ಯಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಸಲಾಮ್ ಕುರಿತ ಖಚಿತ ಮಾಹಿತಿ ಆಧರಿಸಿ ಬಳ್ಳಾರಿಗೆ ಬಂದಿದ್ದ ಆಂಧ್ರ ಪ್ರದೇಶ ಪೊಲೀಸರು, ಕೌಲ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿ ನೆರವಿನೊಂದಿಗೆ ಸಲಾಮ್ ಬಂಧಿಸಿದ್ದಾರೆ. ಪಂಚನಾಮೆ ಬಳಿಕ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆ ಆಂಧ್ರ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಉಗ್ರವಾದ ಹರಡುವುದು ಮತ್ತು ಭಯೋತ್ಪದನಾ ಸಂಘಟನೆಗಳ ನಂಟು ಹೊಂದಿರುವವರ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು, ಈ ಬಗ್ಗೆ ಮಾರ್ಚ್ 23ರಂದು ವಿಜಯವಾಡ ಟೌನ್ ಠಾಣೆಯಲ್ಲಿ FIR ದಾಖಲಿಸಿ ತನಿಖೆ ಆರಂಭಿಸಿದ್ದರು.
ಸರ್ಚ್ ವಾರೆಂಟ್ ಪಡೆದು ಕಾರ್ಯಾಚರಣೆಗಿಳಿದಿದ್ದ ಖಾಕಿ ಟೀಂ, ವಿಜಯವಾಡದ ವಿಂಚ್ಪೇಟ್ನಲ್ಲಿ ಪ್ರಮುಖ ಅರೋಪಿ ಮೊಹಮ್ಮದ್ ರೆಹಮತುಲ್ಲಾ ಷರೀಫ್ (23) ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಸಾಮಾಜಿಕ ಮಾಧ್ಯಮಗಳ ಮೂಲಕ ಸಿದ್ದಾಂತ ಮತ್ತು ಮೂಲಭೂತವಾದಿ ಐಎಸ್‌ಐಎಸ್ ಸಂಘಟನೆಗಳ ವಿಚಾರಧಾರೆ ಪ್ರಚಾರ ನಿರತರ ಬಗ್ಗೆ ಆತ ನೀಡಿದ್ದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ 12 ಮಂದಿಯನ್ನು ಬಂಧಿಸಲಾಗಿದೆ.
ತನಿಖೆಯಲ್ಲಿ ತಿಳಿದುಬಂದಂತೆ, ಅಲ್ ಮಾಲಿಕ್ ಇಸ್ಲಾಮಿಕ್ ಯೂತ್ ಎಂಬ ಗುಂಪನ್ನು ರಚಿಸಿ ಯುವಕರನ್ನ ಜಿಹಾದ್‌ಗೆ ಪ್ರೇರೇಪಿಸುವುದಕ್ಕೂ ಪ್ರಯತ್ನಿಸುತ್ತಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಅತಿರೇಕದ ವಿಷಯಗಳನ್ನು ಹಂಚಿಕೊಂಡು ತಮ್ಮ ಜಾಲವನ್ನು ವಿಸ್ತರಿಸಿದ್ದರು. ಈ ಗುಂಪು ಬಿಹಾರ, ದೆಹಲಿ, ಪಶ್ಚಿಮ ಬಂಗಾಳ, ರಾಜಸ್ಥಾನ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧಿಸಿ ಕಾರ್ಯಚಟುವಟಿಕೆ ನಡೆಸುತ್ತಿತ್ತು ಎನ್ನಲಾಗಿದೆ.