......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ಕೊಡಗಿನಲ್ಲಿ ಭೀಕರ ಅಪಘಾತ: ಚಿತ್ರನಟ ಹರೀಶ್ ಸಾವು

ಕೊಡಗು: ಕಳೆದ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40ವ) ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ.

ಭೀಕರ ಅಪಘಾತಕ್ಕೆ ಸ್ಥಳದಲ್ಲೇ ನಟ ಸಾವು

ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಹಲವು ಸಿನಿಮಾಗಳಲ್ಲಿ, ಧಾರವಾಹಿಗಳಲ್ಲಿ ಅಭಿನಯ

ಮೃತ ಹರೀಶ್ ಅವರು ಬಹುಮುಖಿ ಪ್ರತಿಭೆಯಾಗಿದ್ದರು. ಅವರು ವೃತ್ತಿಜೀವನದ ಜೊತೆಗೇ ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದರು.

ಸ್ಥಳಕ್ಕೆ ಪೊಲೀಸರು ಭೇಟಿ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

No Comments

Leave A Comment