.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ತಿಂಗಳ ಹಿಂದಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್ ಸುಟ್ಟು ಭಸ್ಮ

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ.

ಕಳೆದ ಮಾರ್ಚ್ ನಲ್ಲಿ ಅಷ್ಟೇ ಈ ಶುದ್ಧ ತಿಂಡಿ ಹೋಟೆಲ್ ಹೊಸದಾಗಿ ಆರಂಭವಾಗಿತ್ತು. ಆದರೆ ಇಂದು ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಇಡೀ ಹೋಟೆಲ್ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ, ಒಳಗಡೆ ಇದ್ದ ಸಿಬ್ಬಂದಿ ಬಚಾವ್ ಆಗಿದ್ದಾರೆ.

No Comments

Leave A Comment