....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಗುಂಡಿನ ದಾಳಿ; ಭಾರತದ ನಾಲ್ವರು ನಾವಿಕರು ಬಲಿ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ ಮೇಲೆ ದಾಳಿ ನಡೆದಿತ್ತು. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಆತಂಕ ವ್ಯಕ್ತಪಡಿಸಿದ್ದಾರೆ.

ಅಮೆರಿಕಾ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿ ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ತೆರೆಯಲಾಗುವುದು ಎಂದು ಇರಾನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಭಾರತದ ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಇರಾನ್‌ನ ವಿದೇಶಾಂಗ ಸಚಿವರೇ ಈ ಬಗ್ಗೆ ಹೇಳಿಕೆ ನೀಡಿದ್ದರೂ, ಭಾರತೀಯ ಧ್ವಜವಿದ್ದ ಹಡಗುಗಳ ಮೇಲೆ ದಾಳಿ ನಡೆದಿದೆ. ಭಾರತ ಸರ್ಕಾರ ಇರಾನ್ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ದಾಖಲಿಸಿದೆ ಹಾಗೂ ದಾಳಿಯ ಉದ್ದೇಶದ ಬಗ್ಗೆ ಉತ್ತರಿಸುವಂತೆ ಆಗ್ರಹಿಸಿದೆ.

No Comments

Leave A Comment