.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು.

ಸ್ಫೋಟದಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ಐಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ.

ಈ ಪ್ರಕರಣದಲ್ಲಿ ಶಾರಿಕ್ ತನ್ನ ಮೇಲಿರುವ ಎಲ್ಲಾ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ.

No Comments

Leave A Comment