ಮುಂಬೈ: ವಾಟರ್​ಮೆಲನ್ ನಲ್ಲಿ ಕಾದಿದ್ದ ಜವರಾಯ; ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು....ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್...

ಬೆಂಗಳೂರು: ಪ್ರತಿಷ್ಠಿತ ಕಂಪನಿ ಉದ್ಯೋಗಿ ಪೂಜಾ ನಿಗೂಢ ಸಾವು; ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದು, ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆಯಾಗಿದೆ.

ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಯುವತಿಯನ್ನು 34 ವರ್ಷದ ಪೂಜಾ ದತ್ತ ಎಂದು ಗುರುತಿಸಲಾಗಿದ್ದು, ಆಕೆಯ ಮೃತದೇಹ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅರೆಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.

ಪೂಜಾ ದತ್ತ ಅವರು ಮೂಲತಃ ಜಾರ್ಖಂಡ್‌ನ ಧನಬಾದ್ ಸಮೀಪದ ಹಿರಾಪುರ ನಿವಾಸಿಯಾಗಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಮನೆಯಿಂದ ಭಾರಿ ದುರ್ನಾತ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ಭೀಕರ ದೃಶ್ಯ ಕಣ್ಣಿಗೆ ಬಿದ್ದಿದೆ. ಪೂಜಾ ದತ್ತ ಅವರ ಮೃತದೇಹ ಸಂಪೂರ್ಣವಾಗಿ ಬೆತ್ತಲೆ ಸ್ಥಿತಿಯಲ್ಲಿ ಮತ್ತು ಅರೆಕೊಳೆತ ಸ್ಥಿತಿಯಲ್ಲಿದ್ದು, ಸಾವು ಸಂಭವಿಸಿ ಕನಿಷ್ಠ 2-3 ದಿನಗಳು ಕಳೆದಿರಬಹುದು ಎಂದು ಶಂಕಿಸಲಾಗಿದೆ.

ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸ್ಥಳಕ್ಕೆ ಆಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೂಜಾ ಅವರ ಫೋನ್ ಕರೆಗಳು ಮತ್ತು ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment