.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮುಂಬೈ: ವಾಟರ್ಮೆಲನ್ ನಲ್ಲಿ ಕಾದಿದ್ದ ಜವರಾಯ; ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು
ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಕಲ್ಲಂಗಡಿ ಹಣ್ಣು ಸೇವಿಸಿದ ನಂತರ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣವೇನೆಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮದ ನಂತರ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದ ದಂಪತಿ ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಆಹಾರ ವಿಷಪ್ರಾಶನದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 25 ರಂದು ಜೆಜೆ ಮಾರ್ಗ್ ನಿವಾಸದಲ್ಲಿ ನಡೆದ ಕುಟುಂಬ ಕಾರ್ಯಕ್ರಮದಲ್ಲಿ ಕಲ್ಲಂಗಡಿ ಹಣ್ಣು ಸೇವಿಸಿದ ನಂತರ ಅಬ್ದುಲ್ಲಾ(40), ಅವರ ಪತ್ನಿ ನಸ್ರಿನ್ (35), ಮತ್ತು ಪುತ್ರಿಯರಾದ ಜೈನಾಬ್ (13) ಹಾಗೂ ಆಯೇಷಾ (16) ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಲ್ಲಂಗಡಿ ಹಣ್ಣಿನಲ್ಲಿ ವಿಷ ಶಂಕೆ
ಮೃತರು ಇತರ ಐದು ಅತಿಥಿಗಳೊಂದಿಗೆ ‘ಬಿರಿಯಾನಿ’ ಸೇವಿಸಿದ ನಂತರ ಕಲ್ಲಂಗಡಿ ಹಣ್ಣು ತಿಂದಿದ್ದಾರೆ. ಬಳಿಕ ಅವರಿಗೆ ವಾಂತಿ ಆಗಿದೆ ಮತ್ತು ತಲೆತಿರುಗುವಿಕೆ ಶುರುವಾಗಿದೆ ಎಂದು ಅವರು ಹೇಳಿದ್ದಾರೆ.
ದಂಪತಿ ಮತ್ತು ಮಕ್ಕಳನ್ನು ಮೊದಲು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರ ಸ್ಥಿತಿ ಹದಗೆಟ್ಟ ಕಾರಣ ಅವರನ್ನು ಜೆಜೆ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎಲ್ಲರೂ ಭಾನುವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ತನಿಖೆ ಪ್ರಗತಿಯಲ್ಲಿದೆ
ಬಿರಿಯಾನಿ ಅಥವಾ ಕಲ್ಲಂಗಡಿ ಹಣ್ಣಿನಲ್ಲಿ ವಿಷವಿತ್ತೇ ಅಥವಾ ಎರಡರ ಮಿಶ್ರಣವು ದೇಹದಲ್ಲಿ ಕೆಟ್ಟ ಪ್ರತಿಕ್ರಿಯೆ ಉಂಟುಮಾಡಿತೇ ಎಂಬ ಆತಂಕದ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೊದಲಿಗೆ, ಇದು ಕಲ್ಲಂಗಡಿಯಿಂದ ಆಹಾರ ವಿಷಪೂರಿತ ಪ್ರಕರಣವೆಂದು ತೋರುತ್ತದೆ. ಏಕೆಂದರೆ ‘ಪಲಾವ್’ ಮಾತ್ರ ತಿಂದವರಿಗೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾವಿಗೆ ಕಾರಣವನ್ನು ದೃಢೀಕರಿಸಲು ಹಿಸ್ಟೋಪಾಥಾಲಜಿ ವರದಿಗಾಗಿ ಕಾಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.