....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಬೆಂಗಳೂರು: ಅನಾರೋಗ್ಯದಿಂದ ದಕ್ಷ ಅಧಿಕಾರಿ 39 ವರ್ಷದ SP ಲಾವಣ್ಯ ಹಠಾತ್‌ ನಿಧನ

ಬೆಂಗಳೂರು: ಬೆಸ್ಕಾಂ ವಿಜಿಲೆನ್ಸ್ ವಿಭಾಗದಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 2012ರ ಬ್ಯಾಚ್‌ನ ಅಧಿಕಾರಿ 39 ವರ್ಷದ ಲಾವಣ್ಯ ಬಿ.ಎನ್ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಕಳೆದ ಕೆಲವು ಸಮಯದಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಲಾವಣ್ಯ ಬೆಂಗಳೂರಿನ ಕಾಳಿಂಗ ರಸ್ತೆಯಲ್ಲಿರುವ ಎಚ್‌ಸಿಜಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಮಧ್ಯಾಹ್ನ ಸುಮಾರು 2:30ರ ವೇಳೆಗೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದ ಲಾವಣ್ಯ ಅವರು, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ವಾಸವಾಗಿದ್ದರು. ಲಾವಣ್ಯ ಅವರ ಸಾವಿಗೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.

No Comments

Leave A Comment