....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಇರಾನ್ ಶಾಪಿಂಗ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ – 8 ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

ಟೆಹ್ರಾನ್: ಮೇ. 06,ಟೆಹ್ರಾನ್ ಸಮೀಪದ ಶಾಪಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತುರ್ತು ಸೇವಾ ಇಲಾಖೆ ತಿಳಿಸಿದೆ.

ಆಂಡಿಶೆ ಪಟ್ಟಣದಲ್ಲಿರುವ ಅರ್ಘವನ್ ಶಾಪಿಂಗ್ ಸೆಂಟರ್‌ನಲ್ಲಿ ಮಂಗಳವಾರ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲದಿದ್ದರೂ, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಐಆರ್‌ಐಬಿ ವರದಿ ಮಾಡಿದೆ.

ಬಹುಮಹಡಿ ಕಟ್ಟಡದಿಂದ ಕಪ್ಪು ಹೊಗೆ ದಟ್ಟವಾಗಿ ಹರಡುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟ ದೃಶ್ಯಗಳು ಪ್ರಸಾರವಾಗಿವೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಯುದ್ಧಕ್ಕೆ ಸಂಬಂಧಿಸಿದೆ ಎಂಬ ಯಾವುದೇ ಸೂಚನೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಸುಮಾರು ಮೂರು ವಾರಗಳಿಂದ ಜಾರಿಯಲ್ಲಿರುವ ಕದನ ವಿರಾಮದ ನಡುವೆ ಈ ಅವಘಡ ಸಂಭವಿಸಿದೆ.

No Comments

Leave A Comment