....ನಾಲ್ಕುದಿನಗಳ ಬ್ಯಾ೦ಕ್ ಬ೦ದ್...ಶ್ರೀಗೌರಿಗಣೇಶ ಹಬ್ಬಕ್ಕೆ ಭಕ್ತರಿ೦ದ ಸಕಲ ಸಿದ್ದತೆ...ಶ್ರೀಗಣೇಶ ವಿಗ್ರಹ ತಯಾರಿಕೆಯಲ್ಲಿ ತಲ್ಲೀನ ರಾಗಿರುವ ವಿಗ್ರಹ ರಚನೆಗಾರರು...
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.
ಗುಂಡಿನ ಚಕಮಕಿಯಲ್ಲಿ ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದೆ.