.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಮೂರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಡೆದ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ ಬಿಜೆಪಿ ಬಿಜೆಪಿ ನಾಯಕ ಡಿ ಎನ್ ಜೀವರಾಜ್ ಅವರು ಬುಧವಾರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

 ಮಧ್ಯಾಹ್ನ 3.30ಕ್ಕೆ ವಿಧಾನಸೌಧದ ಮೊದಲ ಮಹಡಿಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಆರ್ ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಸಮ್ಮುಖದಲ್ಲಿ ಡಿಎನ್ ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಜೀವರಾಜ್ ಅವರು ಶೃಂಗೇರಿಯ ಶಾರದಾಂಬೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

2023ರ ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಟಿ ಡಿ ರಾಜೇಗೌಡ ವಿರುದ್ಧ 201 ಮತಗಳ ಅಂತರದಿಂದ ಸೋತಿದ್ದ ಜೀವರಾಜ್ ಅವರು ಅಂಚೆ ಮತಗಳನ್ನು ಮರುಎಣಿಕೆ ಮಾಡಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆಯ ನಂತರ ಕಳೆದ ವಾರಾಂತ್ಯ ಹೈಕೋರ್ಟ್ ಆದೇಶದಂತೆ ನಡೆದ ಮರುಎಣಿಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಪಡೆದಿದ್ದ 569 ಅಂಚೆ ಮತಗಳಲ್ಲಿ 318 ಮತಗಳು ಅಸಿಂಧು ಎಂದು ಘೋಷಿಸಲ್ಪಟ್ಟಿದ್ದು, ಇದರಿಂದ ಫಲಿತಾಂಶದಲ್ಲಿ ಮಹತ್ತರ ಬದಲಾವಣೆಯಾಗಿದೆ. ಇದರ ಪರಿಣಾಮವಾಗಿ ಬಿಜೆಪಿಯ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಮುನ್ನಡೆ ಪಡೆದು ಅಂತಿಮವಾಗಿ ಜಯಗಳಿಸಿದ್ದಾರೆ.

No Comments

Leave A Comment