..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...
ಹಾರ್ಮುಜ್‌ನಲ್ಲಿ ಬೆಂಕಿಗಾಹುತಿಯಾಗಿ ಮುಳುಗಿದ ಬೋಟ್; ಓರ್ವ ಭಾರತೀಯ ನಾವಿಕ ಸಾವು, ನಾಲ್ವರಿಗೆ ಗಾಯ
ಮರದ ಬೋಟ್‌ಗೆ ಬೆಂಕಿಗೆ ಆಹುತಿಯಾಗಿ ಮುಳುಗಿದ ಪರಿಣಾಮ ಭಾರತೀಯ ನಾವಿಕನೊಬ್ಬ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹಾರ್ಮುಜ್ ಬಳಿ ಸಂಭವಿಸಿದೆ.ಬೋಟ್‌ನಲ್ಲಿ 18 ಭಾರತೀಯ ಸಿಬ್ಬಂದಿ ಇದ್ದರು. ಬೋಟ್ ಪಕ್ಕದಲ್ಲೇ ಹಾದುಹೋಗುತ್ತಿದ್ದ ಹಡಗು ಅವರನ್ನು ರಕ್ಷಣೆ ಮಾಡಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ನಾವಿಕರು ದುಬೈನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೋಟ್‌ನಿಂದ ರಕ್ಷಿಸಲ್ಪಟ್ಟ ಭಾರತೀಯ ನಾವಿಕರನ್ನು ನಮ್ಮ ಅಧಿಕಾರಿಗಳು ಭೇಟಿ ಮಾಡಿದ್ದು, ‘ನಾವು ಬೋಟ್ ಮಾಲೀಕರೊಂದಿಗೆ ಸಂಪರ್ಕದಲ್ಲಿದ್ದೇವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತೇವೆ’ ಎಂದು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್ ಪೋಸ್ಟ್ ಮಾಡಿದೆ.