.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ದಳಪತಿ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಿರುವ ಕಾಂಗ್ರೆಸ್ ಇದೀಗ ಸುದೀರ್ಘ 59 ವರ್ಷಗಳ ನಂತರ ಅಧಿಕಾರ ಹಂಚಿಕೊಳ್ಳುತ್ತಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಸಕರಾದ ಎಸ್ ರಾಜೇಶ್ ಕುಮಾರ್ ಮತ್ತು ಪಿ ವಿಶ್ವನಾಥನ್ ಅವರನ್ನು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಅನುಮೋದನೆ ನೀಡಿದ್ದಾರೆ.

ಮೇ 21 ರಂದು ಈ ಇಬ್ಬರು ನಾಯಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಬುಧವಾರ ತಿಳಿಸಿದ್ದಾರೆ.

59 ವರ್ಷಗಳ ದೀರ್ಘ ಅಂತರದ ನಂತರ ಕಾಂಗ್ರೆಸ್ ತಮಿಳುನಾಡು ಸಚಿವ ಸಂಪುಟಕ್ಕೆ ಸೇರುತ್ತಿರುವುದು ಪಕ್ಷಕ್ಕೆ ಐತಿಹಾಸಿಕ ಸಂದರ್ಭವಾಗಲಿದೆ ಎಂದು ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐದು ಶಾಸಕರನ್ನು ಹೊಂದಿರುವ ಕಾಂಗ್ರೆಸ್, ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಡಿಎಂಕೆ ನೇತೃತ್ವದ ಮೈತ್ರಿಕೂಟದಿಂದ ಹೊರಬಂದು ಮೊದಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಟಿವಿಕೆಗೆ ಬೆಂಬಲ ಘೋಷಿಸಿತ್ತು.

ಇದಕ್ಕೂ ಮೊದಲು, ಟಿವಿಕೆ ಸರ್ಕಾರವು ತನ್ನ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಸಿಕೆ ಮತ್ತು ಐಯುಎಂಎಲ್‌ಗೆ ಸಂಪುಟಕ್ಕೆ ಸೇರಲು ಆಹ್ವಾನ ನೀಡಿತ್ತು.

No Comments

Leave A Comment