.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕಲಬುರಗಿ: ಕ್ರೂಸರ್-ಲಾರಿ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಆಸ್ಪತ್ರೆಯಿಂದ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಫಾತದಲ್ಲಿ ಒಂದೇ ಕುಟುಂಬದ ಐವರ ಸಾವು…

ಮೃತ ಐವರೂ ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ತೋಲುಸಾಬ್ ಕ್ಯಾಶ್ವಾರ್ (27ವ), ಹುಸೇನ್ ಶಾ (48ವ), ಮೈಬೂಬ್ ಅಲಿ (45ವ), ರಸೂಲ್ ಬೀ (42ವ), ಫಾತೀಮಾ ಅಲೀ (38ವ) ಮೃತರಾಗಿದ್ದಾರೆ.

ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ರಭಸಕ್ಕೆ ಕ್ರೂಸರ್ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಲಬುರಗಿ ಎಸ್‌ಪಿ ಎ. ಶ್ರೀನಿವಾಸುಲು ಸ್ಥಳಕ್ಕೆ ಭೇಟಿ ನೀಡಿದರು.

No Comments

Leave A Comment