.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ತಾಯಿಯ ಮಡಿಲಲ್ಲಿದ್ದ ಕಂದಮ್ಮನ ತಲೆ ಮೇಲೆ ಬಿದ್ದ ತೆಂಗಿನಕಾಯಿ; ದಾರುಣ ಸಾವು

ಉಡುಪಿ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ.

ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ.

ದಕ್ಷ್ ಗೆ ದಿಯಾ (6) ಎಂಬ ಅಕ್ಕ ಇದ್ದು, ಆಕೆ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.

ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು 13 ವರ್ಷಗಳಿಂದ ಬ್ರಹ್ಮಾವರ ಗಾಂಧಿ ಮೈದಾನದ ಸಮೀಪ ಸಣ್ಣ ಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಕುಟುಂಬ ಜೀವನ ಸಾಗಿಸುತ್ತಿದ್ದರು.

ಮಾಹಿತಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ಸುಮಾರು 8.15 ಗಂಟೆಯ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಗುವನ್ನು ಮಡಿಲಲ್ಲಿ ಮಲಗಿಸಿಕೊಂಡು ತಾಯಿ ತೆಂಗಿನಮರದ ಕೆಳಗೆ ಕುಳಿತಿದ್ದ ವೇಳೆ, ಅಚಾನಕ್ ಆಗಿ ತೆಂಗಿನಕಾಯಿ ಮರದಿಂದ ಬಿದ್ದಿದೆ.

ಕೂಡಲೇ ಸ್ಥಳೀಯರ ನೆರವಿನಿಂದ ಮಗುವನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರೂ ಚಿಕಿತ್ಸ ಫಲಕಾರಿಯಾಗದೆ ಮಗು ಮೃತುಪಟ್ಟಿದೆ.

No Comments

Leave A Comment