....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿದ್ದ SIT ತಂಡದ SP ಕಾರು ಪಲ್ಪಿ, 4 ಅಧಿಕಾರಿಗಳಿಗೆ ಗಾಯ!

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ಬೆಳ್ತಂಗಡಿ ಎಸ್‌ ಐಟಿ ಕಚೇರಿಯಿಂದ ಎಸ್ಪಿ ಸಿ.ಎ ಸೈಮನ್, ಇನ್ಸ್‌ಪೆಕ್ಟ‌ರ್ ಕುಸುಮಾಧರ್, ಸಿಬ್ಬಂದಿ ಪಿಸಿ ಮಂಜುನಾಥ್ ಭೇಟಿ ಮಾಡಲು ಚಿಕ್ಕಮಗಳೂರು ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರು ದಿಬ್ಬಕ್ಕೆ ಗುದ್ದಿ ಪಲ್ಟಿಯಾಗಿದ್ದು ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

No Comments

Leave A Comment