ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...
ಉಡುಪಿ: ಚೆಕ್ ಬೌನ್ಸ್ ಪ್ರಕರಣ: ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ-ಗ್ರಾಹಕ ಆಯೋಗದ ಆದೇಶ ಉಲ್ಲ೦ಘನೆ:ಅಮೃತ್ ಶೆಣೈಗೆ 3ವರ್ಷ ಜೈಲು, ನ್ಯಾಯಾ೦ಗ ಬ೦ಧನ
ಉಡುಪಿ:ಜೂ.25: ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ 3ವರ್ಷಗಳ ಸಾದಾ ಶಿಕ್ಷೆ ಹಾಗೂ ರೂ.1 ಲಕ್ಷ ದಂಡ ವಿಧಿಸಿರುವ ಅಪರೂಪದ ಪ್ರಕರಣ ಉಡುಪಿಯಲ್ಲಿ ನಡೆದಿದೆ.
ಸಂತೋಷ್ ಪೈ ಅವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮುಂದೆ ಸಿ.ಸಿ. ನಂ.76/2023ರಂತೆ ದಾವೆ ಹೂಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಆಯೋಗವು ವೈಗರ್ ಅಪಾರ್ಟ್‌ಮೆಂಟ್‌ನ ಮನೆ ಸಂಖ್ಯೆ 304 ಅನ್ನು ದಾವೆದಾರರ ಹೆಸರಿಗೆ ನೋಂದಣಿ ಮಾಡಿಕೊಡಬೇಕು ಅಥವಾ ಪರ್ಯಾಯವಾಗಿ .ರೂ.27.20 ಲಕ್ಷ ಮೊತ್ತವನ್ನು ವಾರ್ಷಿಕ ಶೇ.9 ಬಡ್ಡಿದರದೊಂದಿಗೆ ಪಾವತಿಸಬೇಕು ಎಂದು ಆದೇಶಿಸಿತ್ತು.
ಆದರೆ, ಆಯೋಗದ ಆದೇಶವನ್ನು ಅಮೃತ್ ಶೆಣೈ ಪಾಲಿಸದ ಹಿನ್ನೆಲೆಯಲ್ಲಿ ಸಂತೋಷ್ ಪೈ ಅವರು ಎಕ್ಸಿಕ್ಯೂಷನ್ ಕೇಸ್ ನಂ.31/2024 ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ವೇಳೆ ಎದ್ರಿದಾರರು ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಸೆಕ್ಷನ್ 72ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ. ಎಂದು ಆಯೋಗ ಪರಿಗಣಿಸಿತು.
ಈ ಹಿನ್ನೆಲೆಯಲ್ಲಿ ಜೂನ್ 24ರಂದು ತೀರ್ಪು ನೀಡಿದ ಆಯೋಗವು ಅಮೃತ್ ಶೆಣೈ ಅವರಿಗೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ, ರೂ.1 ಲಕ್ಷ ದಂಡ ಹಾಗೂ ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಇದೇ ವೇಳೆ ಆರೋಪಿಯನ್ನು ಆಯೋಗದ ಮುಂದೆ ಹಾಜರುಪಡಿಸುವಂತೆ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು. ಅದರಂತೆ ಜೂನ್ 25ರಂದು ಅಮೃತ್ ಶೆಣೈ ಅವರನ್ನು ಆಯೋಗದ ಮುಂದೆ ಹಾಜರುಪಡಿಸಲಾಗಿದ್ದು, ಆಯೋಗವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಳಿಕ ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ರವಾನಿಸಲಾಗಿದೆ.
ಗ್ರಾಹಕ ಆಯೋಗದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆ ವಿಧಿಸಿರುವ ಈ ಪ್ರಕರಣವು ಜಿಲ್ಲೆಯಲ್ಲೇ ಗಮನಾರ್ಹ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.