.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್; ʻದಾಸʼನಿಗೆ 1 ವರ್ಷ ಜೈಲೇ ಗತಿ!
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೆ ಶಾಕ್ ನೀಡಿದ್ದು, ʻದಾಸʼಇನ್ನೂ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ.
ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.
ನಂತರ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ಅದೇಶ ನೀಡಿದ್ದು, ಈ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಖುದ್ದು ಸುಪ್ರೀಂ ಕೋರ್ಟ್‌ನ ರಿಜಿಸ್ಟರ್ ಅವರೇ ಅರ್ಜಿಯನ್ನ ತಿರಸ್ಕರಿಸಿದ್ದಾರೆ.
ತುರ್ತು ಪರಿಸ್ಥಿತಿಗಳಲ್ಲಿ ಜಾಮೀನು ಕೋರಲು ಅವಕಾಶ ನೀಡುವಂತೆ ಕೋರಿ ಆರೋಪಿ ದರ್ಶನ್ ಮನವಿ ಮಾಡಿದ್ದರು. ಆದರೆ ಇದು ಅರ್ಹವಲ್ಲದ ಅರ್ಜಿ, ವಿಚಾರಣೆಗೆ ಪಟ್ಟಿ ಮಾಡಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರಿಗೆ ಮಾಹಿತಿ ನೀಡಿ ಅರ್ಜಿ ತಿರಸ್ಕರಿಸಲಾಗಿದೆ.
ಈ ಹಿಂದೆ, ಪ್ರಕರಣದಲ್ಲಿ 273 ಸಾಕ್ಷಿಗಳ ಪೈಕಿ 15 ಸಾಕ್ಷಿಗಳ ವಿಚಾರಣೆಯಷ್ಟೇ ಮುಗಿದಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ. ಇದೇ ರೀತಿಯಾದರೆ ವಿಚಾರಣೆ ಮುಗಿಯಲು ಹಲವು ವರ್ಷ ಬೇಕಾಗುತ್ತದೆ. ಹೀಗಾಗಿ, ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಕಳೆದ ಮೇ 15 ರಂದು ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ್ದ ಸುಪ್ರೀಂ ಕೋರ್ಟ್, ಅಲ್ಲಿಯವರೆಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಆದೇಶದ ಅನ್ವಯ ಮುಂದಿನ ವರ್ಷ ಮೇ 15ರ ವರೆಗೆ ದರ್ಶನ್ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.