...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಬ್ರಹ್ಮಾವರ: ಅಪ್ರಾಪ್ತ ಬಾಲಕನ ಅಪಹರಣ, ದೌರ್ಜನ್ಯ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಉಡುಪಿ :ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರದ ಮಟಪಾಡಿ ಗ್ರಾಮದ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರ ಬ್ರಹ್ಮಾವರ ಸರ್ಕಾರಿ ಬೋರ್ಡ್ ಹೈಸ್ಕೂಲ್‌ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಜೂನ್ 1ರಂದು ಬೆಳಿಗ್ಗೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಬಾಲಕನನ್ನು ಅಪಹರಿಸಿ ಕೇರಳದ ತಲಪಾಡಿ ಸಮೀಪದ ಕುಂಜತ್ತೂರು ಪದವಿನಲ್ಲಿರುವ ವುಡ್ ಕಂಪೆನಿಗೆ ಬಲವಂತವಾಗಿ ಕರೆದೊಯ್ದು ಕೆಲಸಕ್ಕೆ ಸೇರಿಸಿದ್ದರೆಂದು ಆರೋಪಿಸಲಾಗಿದೆ.

ಮನೆಗೆ ಹೋಗುವುದಾಗಿ ಬಾಲಕ ಹೇಳಿದರೂ ಬಿಡದೆ, ಜೂನ್ 9ರಂದು ಆರೋಪಿಗಳಲ್ಲಿ ಒಬ್ಬನು ವೈರ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಮತ್ತೊಬ್ಬ ಆರೋಪಿ ಚೂರಿ ತೋರಿಸಿ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಈ ಘಟನೆಯನ್ನು ಮತ್ತೋರ್ವ ಆರೋಪಿ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 117/2026ರಡಿ ವಿವಿಧ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿಗಳಾದ ವಿಖ್ಯಾತ್ ಆಚಾರ್ಯ (19) ಹಾಗೂ ಸುಚಿತ್ ನಾಯಕ್ (20) ಅವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಪ್ರಕರಣದ ಮೂರನೇ ಆರೋಪಿ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

No Comments

Leave A Comment