ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...
ಮೈಸೂರಿನಲ್ಲಿ ಎಸ್. ಜಾನಕಿ ಪಾರ್ಥಿವ ಶರೀರದ ಅಂತಿಮ ದರ್ಶನ; ಮಧ್ಯಾಹ್ನ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ
ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತರಲಾಗಿದೆ.
ನಿನ್ನೆ ನಿಧನರಾಗಿದ್ದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಪಾರ್ಥೀವ ಶರೀರವನ್ನು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಅಂತಿಮ ದರ್ಶನಕ್ಕೆ ತರಲಾಗಿದೆ.
ಇದಕ್ಕೂ ಮೊದಲು ಮೈಸೂರಿನ ಬೋಗಾದಿ ಮನೆಯಲ್ಲಿ ಪಾರ್ಥಿವ ಶರೀರವಿದ್ಧು ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಹಾರಾಜ ಕಾಲೇಜು ಗ್ರೌಂಡ್‌ನಲ್ಲಿ ಅಂತಿಮ ದರ್ಶನ ಇದ್ದು ಇಂದು ಮೈಸೂರಿನಲ್ಲಿ S. ಜಾನಕಿ ಅಂತ್ಯಸಂಸ್ಕಾರ ನಡೆಯಲಿದ್ದು ಮೈಸೂರಿನ ಜಾನಕಿ ಅವರ ತೋಟದ ಮನೆಯಲ್ಲಿ ವಿಧಿ ವಿಧಾನ ನಡೆಯಲಿದೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಕಲಾವಿದರು ಹಾಗೂ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಲಿದ್ದಾರೆ.
ನಗರ ಪೊಲೀಸ್ ಆಯುಕ್ತೆ ಸೀಮಾ ಲಟ್ಕರ್ ಅವರು ಮಾತನಾಡಿ, ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಜನರು ಶಾಂತಿಯುತವಾಗಿ ಅಂತಿಮ ದರ್ಶನ ಪಡೆಯುವಂತೆ ಮನವಿ ಮಾಡಿದರು.
ಎಸ್. ಜಾನಕಿ ಅವರ ಅಂತ್ಯಕ್ರಿಯೆ ಮಧ್ಯಾಹ್ನ 3 ಗಂಟೆಯ ಬಳಿಕ ನೆರವೇರಲಿದೆ ಎಂದು ಆಯುಕ್ತೆ ಸೀಮಾ ಲಟ್ಕರ್ ತಿಳಿಸಿದ್ದಾರೆ.
ಗಾಯಕಿಯ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸುತ್ತಿದ್ದು, ಮೈಸೂರು ನಗರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.