ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ
ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅಮೃತಾ ನಿನ್ನೆ ಪ್ರಾಣಬಿಟ್ಟಿದ್ದಾರೆ.
ಅಮೃತಾ ಮತ್ತು ಆರೋಪಿ ಸೂರ್ಯ ಸಹೋದರ ಧನುಷ್ ಪರಸ್ಪರ ಪ್ರೀತಿಸುತ್ತಿದ್ದರು. ಇವರೆಲ್ಲ ಒಂದೇ ಏರಿಯಾದವರಾಗಿದ್ದು, ಓಂ ಶಕ್ತಿ ಮಾಲೆ ಹಾಕುವ ವೇಳೆ ಎರಡು ಕುಟುಂಬಗಳ ನಡುವೆ ಪರಿಚಯವಾಗಿತ್ತು. ಅದೇ ಪರಿಚಯದಿಂದ ಧನುಷ್ ಮತ್ತು ಅಮೃತಾ ಆತ್ಮೀಯರಾಗಿದ್ರು. ಬಳಿಕ ಪರಸ್ಪರ ಪ್ರೀತಿಸಲು ಆರಂಭಿಸಿದ್ದರು.
ಧನುಷ್ಗೆ ಅದಾಗಲೇ ಮದುವೆಯಾಗಿ 1 ಮಗುವಿದ್ದು, ಪತ್ನಿಯಿಂದ ಆತ ವಿಚ್ಚೇದನ ಪಡೆದಿದ್ದ. ಆದರೆ ಈ ವಿಚಾರವನ್ನು ಅಮೃತಾಳಿಂದ ಮುಚ್ಚಿಟ್ಟಿದ್ದ ಎನ್ನಲಾಗಿದೆ. ನಂತರ ವಿಷಯ ಗೊತ್ತಾದ ಬಳಿಕ ಧನುಷ್ನಿಂದ ಅಮೃತಾ ದೂರವಾಗಿದ್ದರು. ಇದೇ ವಿಚಾರಕ್ಕೆ ಜು.13ರಂದು ಯುವತಿ ಮನೆ ಬಳಿ ಧನುಷ್ ಸಹೋದರ ಸೂರ್ಯ ಗಲಾಟೆ ಮಾಡಿದ್ದು, ಚಾಕು ಇರಿದಿದ್ದ. ಪ್ರಕರಣ ಸಂಬಂಧ ಆರೋಪಿಗಳಾದ ಸೂರ್ಯ ಮತ್ತು ಧನುಷ್ನನ್ನು ಪೊಲೀಸರು ಬಂಧಿಸಿದ್ದು, ಜೀವನ್ಭೀಮಾನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದೆ.