ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಯುವತಿ ಹತ್ಯೆಗೈದ ಯುವಕನ ಬಂಧನ; ವಿಷ ಸೇವನೆಯಿಂದ ಪರಿಸ್ಥಿತಿ ಗಂಭೀರ!

ಮಂಗಳೂರು: ಹಾಡಹಗಲೇ ಯುವತಿಯ ಕಗ್ಗೊಲೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಬಂಟ್ವಾಳದ ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಲಾವಣ್ಯ (21) ಎಂಬ ಯುವತಿಯನ್ನು ಹತ್ಯೆಗೈದ ಆರೋಪಿ ಚೇತನ್ (22) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿಯ ಒಡಿಲ್ನಾಳ ನಿವಾಸಿಯಾಗಿರುವ ಚೇತನನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡಿಯ ಬಳಿ ತನ್ನ ಕಾರಿನ ಪಕ್ಕದಲ್ಲಿ ಕುಳಿತಿದ್ದಾಗ ಬಂಧಿಸಲಾಯಿತು. ಘಟನೆಯ ನಂತರ ಆತ ಇಲಿ ಪಾಷಾಣ (ವಿಷ) ಸೇವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಆತನನ್ನು ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿಯಾಗಿದ್ದ ಹಾಗೂ ಕಲ್ಲಡ್ಕದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ಅವರನ್ನು ಚೇತನ್ ಗುರುವಾರ ಸಂಜೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದನು. ಸಂತ್ರಸ್ತೆಯ ದೂರದ ಸಂಬಂಧಿಯಾಗಿದ್ದ ಚೇತನ್ ಆಕೆಯನ್ನು ಪ್ರೀತಿಸುತ್ತಿದ್ದನು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದೇ ವೇಳೆ, ಅವರಿಬ್ಬರೂ ಹಿಂದೆ ಪ್ರೇಮ ಸಂಬಂಧ ಹೊಂದಿದ್ದರು ಆದರೆ ಸುಮಾರು 4 ವರ್ಷಗಳ ಹಿಂದೆ ಬೇರ್ಪಟ್ಟಿದ್ದರು ಎಂದು ಆಕೆಯ ಸಂಬಂಧಿಕರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚೇತನ್ ಲಾವಣ್ಯ ಅವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ, ಆರೋಪಿಯನ್ನು ಪತ್ತೆಹಚ್ಚಲು ಬಂಟ್ವಾಳ ನಗರ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿದ್ದರು. ಬಳಿಕ ಆತನನ್ನು ಮಂಗಳೂರಿನ ಪಚ್ಚನಾಡಿಯಲ್ಲಿ ಬಂಧಿಸಲಾಯಿತು. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)2023ರ ಸೆಕ್ಷನ್ 78, 103 ಮತ್ತು 106ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

No Comments

Leave A Comment