....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ: 3.31 ಲಕ್ಷ ರೂ. ಮೌಲ್ಯದ ಎಂಡಿಎಂಎ, ಹೈಡ್ರೋಗಾಂಜಾ ವಶ; ಮೂವರು ಬಂಧನ

ಉಡುಪಿ:ಜು.19,ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉಡುಪಿ ಸಮೀಪದ ಪಿತ್ರೋಡಿ ಉದ್ಯಾವರ ನಿವಾಸಿ ವಿಜಯ ಪೂಜಾರಿ (36), ಕುಕ್ಕುಂದೂರು ನಿವಾಸಿ ಪಿ. ಎ. ಮೊಹಮ್ಮದ್ ಸಮ್ಮಾಸ್ (24), ಹಾಗೂ ಕಾರ್ಕಳದ ಮಿಯಾರು ನಿವಾಸಿ ಆಕಾಶ್ ಶೆಟ್ಟಿ (20) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಎಂಡಿಎಂಎ ಪುಡಿ, ಹೈಡ್ರೋ ಗಾಂಜಾ ಹಾಗೂ ಎಂಡಿಎಂಎ ಮಾತ್ರೆಗಳು ಹಾಗೂ ಕಾರು ಸೇರಿದಂತೆ ಒಟ್ಟು ಸುಮಾರು 3,31,500 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಕೆ. ಯು ರವರ ಮಾರ್ಗದರ್ಶನದಲ್ಲಿ ಹಾಗೂ ಮಲ್ಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

ಶಿವಳ್ಳಿ ಗ್ರಾಮದೊಂದರಲ್ಲಿ ಆರೋಪಿಗಳು ಮಾದಕ ವಸ್ತುಗಳನ್ನು ಹೊಂದಿದ್ದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ದಾಳಿ ವೇಳೆ ಆರೋಪಿಗಳಿಂದ 4 ಗ್ರಾಂ ಎಂಡಿಎಂಎ ಪುಡಿ, 2.5 ಗ್ರಾಂ ಹೈಡ್ರೋ ಗಾಂಜಾ, 3.65 ಗ್ರಾಂ ಎಂಡಿಎಂಎ ಮಾತ್ರೆಗಳು, 3 ಗ್ರಾಂ ಗಾಂಜಾ, ಮಾದಕ ವಸ್ತು ಸಾಗಾಣಿಕೆಗೆ ಬಳಸಲಾಗುತ್ತಿದೆ ಎನ್ನಲಾದ ಒಂದು ಕಾರು ಹಾಗೂ ಇತರೆ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 3.31 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ 95/2026 ಕಲಂ 8(ಸಿ), 20(ಸಿ), 22(ಎ) ಎನ್‌ಡಿಪಿಎಸ್ ಆ್ಯಕ್ಟ್ 1985 ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಉಡುಪಿ ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಶ್ ಟಿ.ಎಂ., ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪ್ರವೀಣ್ ಕುಮಾರ್, ಹಿರಿಯಡ್ಕ ಪೊಲೀಸ್ ಠಾಣೆಯ ಪ್ರವೀಣ್ ಶೆಟ್ಟಿಗಾರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಇಂದ್ರೇಶ್, ಹನುಮಂತ ಅಸ್ಕಿ, ಮನು ಕುಮಾರ್, ರಶ್ಮಿ ಹೆಗಡೆ, ರವಿ ಕುಮಾರ್, ಶ್ರೀನಿವಾಸ್, ಸಂತೋಷ್ ಮತ್ತು ದಿನೇಶ್ ಭಾಗವಹಿಸಿದ್ದರು.

No Comments

Leave A Comment