.....ದೇಶದೆಲ್ಲೆಡೆಯಲ್ಲಿ ಸ೦ಭ್ರಮದ ದೀಪಾವಳಿ ಹಬ್ಬ...ಗೂಡುದೀಪ,ಸಿಹಿತಿ೦ಡಿ,ಹೊಸಬಟ್ಟೆ ಯ ಖರೀದಿಯಲ್ಲಿ ನಾಡಿನ ಜನತೆ-ಎಲ್ಲೆಡೆಯಲ್ಲಿ ಪಟಾಕಿಯ ಸದ್ದು.......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿ ಬೆಳಕಿನ ಹಬ್ಬ ದೀಪಾವಳಿಯು ಶುಭವನ್ನು೦ಟುಮಾಡಲಿ ಎ೦ದು ಕರಾವಳಿಕಿರಣ ಡಾಟ್ ಶುಭವನ್ನು ಕೋರುತ್ತಿದೆ....

ಅಮೆರಿಕದಲ್ಲಿ ರಸ್ತೆ ಅಪಘಾತ: ಹೈದರಾಬಾದ್ ಮೂಲದ ಒಂದೇ ಕುಟುಂಬದ 3 ಮಂದಿ ದಾರುಣ ಸಾವು; ಇಬ್ಬರ ಸ್ಥಿತಿ ಗಂಭೀರ

ವಾಷಿಂಗ್ಟನ್: ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.

ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ನವೀದ್ ಪತ್ನಿ ನಾಜಿಯಾ ಸಲ್ಮಾ, ಅವರ ಪುತ್ರ ಹಾಗೂ ಪುತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನವೀದ್ ಮತ್ತು ಅವರ ಕಿರಿಯ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶೇಖ್ ನವೀದ್ ಸುಮಾರು 10 ವರ್ಷಗಳ ಹಿಂದೆ ಉದ್ಯೋಗ ನಿಮಿತ್ತ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿಯೇ ಕುಟುಂಬದೊಂದಿಗೆ ನೆಲೆಸಿದ್ದ ಅವರು ಕುಟುಂಬ ಸಮೇತರಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನವೀದ್ ಅವರ ತಂದೆ ಶೇಖ್ ಅಬ್ದುಲ್ ಸಯೀದ್ ಅವರು ಮಗನಿಗೆ ಕರೆ ಮಾಡಿದ ವೇಳೆ ಅಮೆರಿಕದ ಪೊಲೀಸರಿಂದ ಅಪಘಾತದ ಬಗ್ಗೆ ಮಾಹಿತಿ ತಿಳಿದುಬಂದಿದೆ ಎಂದು ಹೇಳಿದ್ದಾರೆ.

No Comments

Leave A Comment