..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ಅನಂತನಾಗ್‌ನಲ್ಲಿ ಪೊಲೀಸರ ತಂಡದ ಮೇಲೆ ಉಗ್ರರಿಂದ ಗಂಡಿನ ದಾಳಿ; ಓರ್ವ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜು. 22,ಜಮ್ಮು ಕಾಶ್ಮೀರದಲ್ಲಿ ಉಗ್ರರು ಪೊಲೀಸರ ತಂಡದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಬುಧವಾರ ಮಧ್ಯಾಹ್ನ ಸುಮಾರು 12:30ಕ್ಕೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ.

ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಆಶಿಕ್ ಹುಸೇನ್ ಕುರೇಷಿ(35) ಅವರು ಈ ಉಗ್ರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಅನಂತನಾಗ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪ್ರಸ್ತುತ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿವೆ. ದಾಳಿ ನಡೆಸಿ ಪರಾರಿಯಾಗಿರುವ ಉಗ್ರರ ಪತ್ತೆಗಾಗಿ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಿವೆ.

No Comments

Leave A Comment