..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ಕೂಡಲೇ ಧರ್ಮೇಂದ್ರ ಪ್ರಧಾನ್`ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ’: ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಎಚ್ಚರಿಕೆ

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೂಡಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಬೇಕು ಎಂದು ಪ್ರಧಾನಿ ಮೋದಿಗೆ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಮತ್ತೆ ಒತ್ತಾಯಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಕಾಕ್ರೋಚ್ ಜನತಾ ಪಕ್ಷದ (CJP) ಮುಖ್ಯಸ್ಥ ಅಭಿಜೀತ್ ದೀಪ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದು, ಇಲ್ಲವಾದರೆ ಹೋರಾಟ ಪ್ರಧಾನಿ ರಾಜೀನಾಮೆಯ ಬೇಡಿಕೆಯಾಗಿಯೂ ರೂಪಾಂತರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ದೆಹಲಿಯ ಜಂತರ್‌ ಮಂತರ್‌ನಲ್ಲಿ ಗುರುವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದೀಪ್ಕೆ, “ಮೋದಿ ಜೀ, ಮತ್ತೊಮ್ಮೆ ನಿಮ್ಮಲ್ಲಿ ವಿನಂತಿಸುತ್ತೇನೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿ. ಇಲ್ಲವಾದರೆ ಹೋರಾಟ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಮಾತ್ರ ಸೀಮಿತವಾಗುವುದಿಲ್ಲ; ನಿಮ್ಮ ರಾಜೀನಾಮೆಯನ್ನೂ ಕೇಳುವ ಹಂತಕ್ಕೆ ತಲುಪುತ್ತದೆ” ಎಂದು ಹೇಳಿದರು.

‘ವಿಫಲ ಸಚಿವರಿಗಿಂತ ವಿದ್ಯಾರ್ಥಿಗಳು ಮುಖ್ಯ’

“ಅಸಮರ್ಥ ಹಾಗೂ ವಿಫಲ ಸಚಿವರು ಈ ದೇಶದ ಕೋಟ್ಯಂತರ ವಿದ್ಯಾರ್ಥಿಗಳಿಗಿಂತ ದೊಡ್ಡವರಲ್ಲ. ಒಬ್ಬ ವಿಫಲ ಸಚಿವರನ್ನು ವಿದ್ಯಾರ್ಥಿಗಳಿಗಿಂತ ಹೆಚ್ಚು ಮಹತ್ವದ್ದೆಂದು ಪರಿಗಣಿಸಿದರೆ, ಮುಂದಿನ ಚುನಾವಣೆಯಲ್ಲಿ ದೇಶದ ಜನರು ನಿಮಗೆ ಮತ ಹಾಕುವುದಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಿ,” ಎಂದು ದೀಪ್ಕೆ ವಾಗ್ದಾಳಿ ನಡೆಸಿದರು.

ನಾಳೆ ದೇಶವ್ಯಾಪಿ ಪ್ರತಿಭಟನೆಗೆ ಕರೆ

ಇದೇ ವೇಳೆ ಕಾಕ್ರೋಚ್ ಜನತಾ ಪಕ್ಷ (CJP) ಶುಕ್ರವಾರ ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದೆ. ದೇಶದ ವಿವಿಧ ಭಾಗಗಳಲ್ಲಿ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ಬೆಂಬಲಕ್ಕೆ ಜನರು ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಪಕ್ಷ ಮನವಿ ಮಾಡಿದೆ.

ಸಾಮಾಜಿಕ ಜಾಲತಾಣ ‘ಎಕ್ಸ್‌’ (X) ನಲ್ಲಿ ಪೋಸ್ಟ್ ಮಾಡಿರುವ ಸಿಜೆಪಿ, “ಸಭೆಯ ಮುಂದೆ ವಿದ್ಯಾರ್ಥಿಗಳ ಬೇಡಿಕೆಗಳನ್ನು ಜೋರಾಗಿ ಓದಿ. ವಿದ್ಯಾರ್ಥಿ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಪರಸ್ಪರ ಸಹಕಾರದಿಂದ ಅನುಮತಿ ಮತ್ತು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು” ಎಂದು ಕರೆ ನೀಡಿದೆ.

ಸಂಸತ್ ಚಲೋ ಬಳಿಕ ಪ್ರತಿಭಟನೆ ತೀವ್ರ

ಜುಲೈ 20ರಂದು ನಡೆದ ‘ಸಂಸತ್ ಚಲೋ’ ಪ್ರತಿಭಟನೆಯ ವೇಳೆ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕೈಗೊಂಡ ಕ್ರಮದ ಬಳಿಕ ಈ ಹೊಸ ಪ್ರತಿಭಟನೆಯ ಕರೆ ನೀಡಲಾಗಿದೆ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಸಿಜೆಪಿ ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಪ್ರಯತ್ನ ಮುಂದುವರಿದಿದೆ.

No Comments

Leave A Comment