.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ನೀಟ್‌ ಪರೀಕ್ಷಾ ಅಕ್ರಮ ;ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ನವದೆಹಲಿ:ಜು. 25, ನೀಟ್‌ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ ಬೆನ್ನಲ್ಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್‌ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್‌ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆʼ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ಅವರು ರಾಜೀನಾಮೆ ನೀಡಿದ್ದಾರೆ.

ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು (ಶನಿವಾರ) ಮಧ್ಯಾಹ್ನದವರೆಗೆ ಸಮಯ ಕೋರಿದ್ದರು. ಆದರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ. ಈ ಮೂಲಕ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಎಲ್ಲ ಬೇಡಿಕೆಗಳೂ ಈಡೇರಿದಂತಾಗಿದೆ.

No Comments

Leave A Comment