.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ- ಆರೋಪಿಗಾಗಿ ಶೋಧ

ಮಂಗಳೂರು:ಜು. 25, ಅಪರಿಚಿತ ದುಷ್ಕರ್ಮಿ ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಲಾಲ್‌ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಹಲ್ಲೆಗೊಳಗಾದವನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ನಡೆದಾಗ ಅವರು ಮಧ್ಯಾಹ್ನ 1:45 ರ ಸುಮಾರಿಗೆ ಸ್ಕೂಟರ್ ಸವಾರಿ ಮಾಡುತ್ತಿದ್ದ ಎನ್ನಲಾಗಿದೆ. ರೌಡಿ ಶೀಟರ್ ಆಗಿರುವ ಈತ, ಮಾದಕವಸ್ತು ಮಾರಾಟದ ಕಾರಣಕ್ಕೆ ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಗಾಯಗೊಂಡ ರೌಡಿ ಶೀಟರ್ ವಿಕ್ಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕುತ್ತಿಗೆಯ ಬಳಿ ಆಳವಾದ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೌಡಿಶೀಟರ್‌ ವಿಕ್ಕಿ ಮೇಲೆ ಪ್ರಸ್ತುತ ಹಲ್ಲೆ ಮತ್ತು ಎನ್‌ಡಿಪಿಎಸ್ ಪ್ರಕರಣಗಳು ಸೇರಿದಂತೆ 11 ಪ್ರಕರಣಗಳು ದಾಖಲಾಗಿವೆ. ಇತರ ಆರು ಪ್ರಕರಣಗಳಲ್ಲಿ ಆತನನ್ನು ಖುಲಾಸೆಗೊಳಿಸಲಾಗಿದೆ.

ಪೊಲೀಸ್ ಅಧಿಕಾರಿಗಳು ನಗರದಾದ್ಯಂತ ಚೆಕ್‌ಪೋಸ್ಟ್‌ಗಳಿಗೆ ಮಾಹಿತಿ ನೀಡಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಮಂಗಳೂರು ಪೂರ್ವ ಉಪವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ತನಿಖೆಯ ನೇತೃತ್ವ ವಹಿಸಲಿದ್ದಾರೆ. ದಾಳಿಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪ್ರಾಥಮಿಕ ತನಿಖೆಗಳು ನಡೆಯುತ್ತಿವೆ.

No Comments

Leave A Comment