.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಗೋಮಾತೆಯ ಗೌರವದ ಅಭಿಯಾನ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ

ಉಡುಪಿ : ಗೋಮಾತೆಯ ಗೌರವದ ಅಭಿಯಾನ ಅಂಗವಾಗಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಇಂದು ಜುಲೈ 27 ರಂದು ಮನವಿ ಸಲ್ಲಿಸಲಾಯಿತು.

ಉಡುಪಿ ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು.

ಭಾರತದಲ್ಲಿ ಗೋ ಹತ್ಯೆ ನಿಷೇಧ ಸಂಪೂರ್ಣವಾಗಿ ಜಾರಿಯಾಗಬೇಕು, ಹಸುವಿಗೆ ರಾಷ್ಟ್ರ ಮಾತೆ ಅಥವಾ ರಾಷ್ಟ್ರೀಯ ಪ್ರತಿಷ್ಠಾನದ ಗೌರವಾನ್ವಿತ ಸ್ಥಾನಮಾನ ನೀಡಬೇಕು,ಗೋ ಸೇವೆಗಾಗಿ ಕೇಂದ್ರೀಯ ಕಾನೂನನ್ನು ಜಾರಿಗೆ ತರಬೇಕು ಮತ್ತು ಕೇಂದ್ರೀಯ ಸಚಿವಾಲಯವನ್ನು ಸ್ಥಾಪನೆ ಮಾಡಬೇಕು, ಮೇವು ಭದ್ರತಾ ನೀತಿಯನ್ನು ಅಂತಿಮಗೊಳಿಸಬೇಕು ಅದೇ ರೀತಿ ವೇದ ಲಕ್ಷಣ ಗೋ ವಂಶದ ಜಾನುವಾರುಗಳಿಂದ ಪಡೆದ ಪಂಚಗವ್ಯ ಉತ್ಪನ್ನಗಳ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆಗಳನ್ನು ಮನವಿ ಪತ್ರದಲ್ಲಿ ಸಲ್ಲಿಸಲಾಗಿದೆ.

ಮನವಿಯನ್ನು ರಾಜ್ಯಪಾಲರಿಗೆ ಕೂಡ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಗೋಮಾತೆಯ ಗೌರವ ಅಭಿಯಾನದ ತಾಲೂಕು ಸಂಚಾಲಕರುಗಳಾದ ಮಾಜಿನಗರ ಸಭಾ ಸದಸ್ಯ ವಿಜಯ್ ಕೊಡವೂರು, ಮಾಜಿ ಜಿ.ಪಂ ಸದಸ್ಯೆ ಗೀತಾಂಜಲಿ ಸುವರ್ಣ, ಬ್ರಹ್ಮಾವರ ತಾಲೂಕು ಪ್ರಮುಖರಾದ ರಾಘವೇಂದ್ರ ಪ್ರಭು ಕರ್ವಾಲು, ವೀಣಾ ಶೆಟ್ಟಿ, ರಮಿತಾ ಸೂರ್ಯವಂಶಿ, ಸಂತೋಷ್, ಎಬಿವಿಪಿ ಪ್ರಮುಖರಾದ ರಂಜಿತ್, ಮುಂತಾದವರು ಉಪಸ್ಥಿತರಿದ್ದರು.

No Comments

Leave A Comment