....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಜು.29ರ೦ದು ಉಡುಪಿಯಲ್ಲಿ ಕಿದಿಯೂರು ಕೋ- ಆಪರೇಟಿವ್ ಸೊಸೈಟಿ ಶುಭಾರ೦ಭ…
ಉಡುಪಿ:ಉಡುಪಿ ನಗರದ ಕಿನ್ನಿಮೂಲ್ಕಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಿದಿಯೂರು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಜು.29ರ ಬುಧವಾರದದಿ೦ದ ಶುಭಾರ೦ಭಗೊಳ್ಳಲಿದೆ. ಅಪರಾಹ್ನ 3.30ರಿಂದ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೊಸೈಟಿಯನ್ನು ಉದ್ಘಾಟಿಸುವರು ಎಂದು ಸೊಸೈಟಿ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ. ಶಂಕರ್, ಬೆಂಗಳೂರು ಎಂ.ಆರ್.ಜಿ. ಗ್ರೂಪ್ ಆಡಳಿತ ನಿರ್ದೇಶಕ ಡಾ.ಕೆ.ಪ್ರಕಾಶ ಶೆಟ್ಟಿ ಮತ್ತು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅಭ್ಯಗತರಾಗಿ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬೃಜೇಶ್ ಚೌಟ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯಶಪಾಲ್ ಸುವರ್ಣ, ಸುನಿಲ್ ಕುಮಾರ್, ಗುರ್ಮೆ ಸುರೇಶ ಶೆಟ್ಟಿ, ಕಿರಣ್ ಕೊಡ್ಗಿ ಮತ್ತು ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಹಿರಿಯ ಸಹಕಾರಿ ಧುರೀಣ ಟಿ.ಶಂಭು ಶೆಟ್ಟಿ, ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಪಡುಬಿದ್ರಿ ಆಸ್ಪೆನ್ ಇನ್ಫ್ರಾಸ್ಟಕ್ಚರ್ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ, ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕರಾರಾದ ಡಾ.ಜಿ.ಎಸ್.ಚಂದ್ರಶೇಖರ್, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ, ಭುವನೇಂದ್ರ ಕಿದಿಯೂರು ಮತ್ತು ಶ್ರೀಪತಿ ಭಟ್ ಉಚ್ಚಿಲ, ಟೌನ್ ಕೋ-ಆಪರೇಟಿವ್ ಅಧ್ಯಕ್ಷ ಜಯಪ್ರಕಾಶ ಕೆದ್ಲಾಯ, ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್, ಸದ್ಗುರು ಕೋ-ಆಪರೇಟಿವ್ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಅತಿಥಿಗಳಾಗಿ ಆಗಮಿಸುವರು ಎಂದು ಉದಯಕುಮಾರ್ ಶೆಟ್ಟಿ ವಿವರಿಸಿದರು.
ಪ್ರಸ್ತುತ 550 ಮಂದಿ ಸದಸ್ಯರನ್ನು ಹೊಂದಿರುವ ಸೊಸೈಟಿ, ವಿವಿಧ ಠೇವಣಿ, ಸಾಲ ಸೌಲಭ್ಯ ಕಲ್ಪಿಸಲಿದೆ. ಮುಂದಿನ ದಿನಗಳಲ್ಲಿ ಅವಿಭಜಿತ ಜಿಲ್ಲೆ ಮಾತ್ರವಲ್ಲದೇ ರಾಜ್ಯ ಮಟ್ಟದಲ್ಲೂ ಶಾಖೆಗಳನ್ನು ತೆರೆಯುವ ಆಶಯ ಹೋದಿದೆ ಎಂದರು.
ಸೊಸೈಟಿ ಉಪಾಧ್ಯಕ್ಷೆ ಪ್ರಣೀತಾ ಶರತ್ ಶೆಟ್ಟಿ, ಸಿಇಓ ಹರ್ಷಿತಾ ಮತ್ತು ನಿರ್ದೇಶಕ ಸುಧಾಕರ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.