.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಜಪಾನ್‌ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ; ಹಲವು ಕಟ್ಟಡಗಳು ನೆಲಸಮ, 13 ಮಂದಿ ಸಾವು
ಟೋಕಿಯೋ:ಜು. 29,ಜಪಾನ್‌ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ ಮಧ್ಯಾಹ್ನ 4:27ಕ್ಕೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ ತಿಳಿಸಿದ್ದಾರೆ.
ಭೂಕಂಪದ ತೀವ್ರತೆಯು 6.8 ರಷ್ಟಿದ್ದು, 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಆದರೆ ಆರಂಭಿಕ ವರದಿಗಳು ಇದು 7.1 ತೀವ್ರತೆ ಹೊಂದಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಈ ಪ್ರಬಲ ಭೂಕಂಪದಿಂದಾಗಿ ಹಲವೆಡೆ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ ಹಲವೆಡೆ ಕಟ್ಟಡಗಳು ಕುಸಿದಿದ್ದು, ಸೇತುವೆಗಳು ಜಖಂಗೊಂಡಿವೆ ಮತ್ತು ಗೂಡ್ಸ್ ರೈಲುಗಳು ಉರುಳಿಬಿದ್ದಿವೆ.
ಭೂಕಂಪದ ಬಳಿಕ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಒಂದು ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದ ಜನರು ತಕ್ಷಣ ಸುರಕ್ಷಿತ ಹಾಗೂ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಜಪಾನ್ ಸರ್ಕಾರ ಸೂಚಿಸಿದೆ. ಇನ್ನು ಕುಮಾಮೊಟೊ, ನಾಗಸಾಕಿ, ಕಾಗೋಶಿಮಾ, ಫುಕುವೋಕಾ, ಸಾಗಾ, ಓಯಿಟಾ ಹಾಗೂ ಮಿಯಾಜಾಕಿ ಸೇರಿದಂತೆ ಹಲವು ಪ್ರಾಂತ್ಯಗಳಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ.