.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಬೆಂಗಳೂರು: ಕೆಲಸದ ಅವಧಿಯಲ್ಲಿ ಮೋಜು – 6 ಮಂದಿ ಪಿಡಿಓಗಳು ಅಮಾನತು
ಬೆಂಗಳೂರು:ಜು. 29,ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ್ದ 6 ಜನ ಪಿಡಿಓಗಳನ್ನ ಸಸ್ಪೆಂಡ್ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅಮಾನತು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ (ಜು.24ರಂದು) ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ ಮೋಜು ಮಸ್ತಿ ಮಾಡಿದ ಬಗ್ಗೆ ಹಲವು ಮಾಧ್ಯಮಗಳಲ್ಲಿ ದೃಶ್ಯ ಸಹಿತ ವರದಿ ಪ್ರಸಾರವಾಗಿದ್ದ ಹಿನ್ನೆಲೆಯಲ್ಲಿ ಪಾರ್ಟಿಯಲ್ಲಿ ಪಾಲ್ಗೊಂಡ ಎಲ್ಲರಿಗೂ ಕಾರಣ ಕೇಳಿ ನೋಟಿಸ್ ನೀಡಿ, ಕರ್ತವ್ಯದ ಸಮಯದಲ್ಲಿ ಒಂದು ಕಡೆ ಸೇರಿ ಪಾರ್ಟಿ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾದಲ್ಲಿ ಅಮಾನತು ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ 6 ಪಿಡಿಓ ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು, ಇಂದು ಈ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶಿವಗಂಗೆ ಗ್ರಾ.ಪಂ.ನ ಗಿರೀಶ್, ಅಗಳಕುಪ್ಪೆ ಗ್ರಾ.ಪಂ.ನ ಹರೀಶ್, ಗೊಲ್ಲಹಳ್ಳಿ ಗ್ರಾ.ಪಂ.ನ ಪ್ರಶಾಂತ್ ಡಿ, ಮಣ್ಣೆ ಗ್ರಾ.ಪಂ.ನ ಚಿರಂಜೀವಿ, ಸೋಂಪುರ ಗ್ರಾ.ಪಂ. ರವಿಶಂಕರ್, ಬೆಟ್ಟಕೋಟೆ ಗ್ರಾ.ಪಂ.ನ ದಿನೇಶ್ ಬಿ.ಎಂ., ಅಗಳಕುಪ್ಪೆ ಗ್ರೇಡ್ 1 ಕಾರ್ಯದರ್ಶಿ ಕೆಂಪರಂಗಯ್ಯ, ಬೂದಿಹಾಲ್ ಗ್ರಾ.ಪಂ. ಗ್ರೇಡ್ 2 ಕಾರ್ಯದರ್ಶಿ ಗಂಗಾಧರ್, ಸೋಂಪುರ ಗ್ರಾ.ಪಂ. ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಮಂಜುನಾಥ್ ಇವರುಗಳನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ ಉಲ್ಲಂಘಿಸಿರುವುದು ಹಾಗೂ ಕರ್ತವ್ಯದ ಸಮಯದಲ್ಲಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಿಲ್ಲದ ಕಾರಣದ ಮೇಲೆ ಈ ಅಮಾನತು ಆದೇಶ ಹೊರಡಿಸಲಾಗಿದೆ.