..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....

ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ(CWRC) ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಹ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಪ್ರತಿನಿತ್ಯ ತಮಿಳುನಾಡಿಗೆ 3,500 ಕ್ಯೂಸೆಕ್‌ ನೀರು ಹರಿಸುವಂತೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ.

CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ ನೀರು ಹರಿಸಬೇಕು ಎಂದು CWRC ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು CWMA ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಪ್ರಾಧಿಕಾರವು CWRC ನೀಡಿದ್ದ ಆದೇಶವನ್ನು ಎತ್ತಿಹಿಡಿದಿದ್ದು ನೀರು ಬಿಡುವಂತೆ ರಾಜ್ಯಕ್ಕೆ ಸೂಚಿಸಿದೆ.

ಇಂದು ಮಧ್ಯಾಹ್ನ ದೆಹಲಿಯಲ್ಲಿ ಎಸ್.ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ CWMA ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಖುದ್ದಾಗಿ ಭಾಗವಹಿಸಿ ರಾಜ್ಯದ ಜಲಾಶಯಗಳ ನೀರಿನ ಅಭಾವದ ಪರಿಸ್ಥಿತಿಯನ್ನು ವಿವರಿಸಿದರು. ತಮಿಳುನಾಡು ಸರ್ಕಾರದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

No Comments

Leave A Comment