ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ 5ನೇ ದಿನದತ್ತ ಸಾಗುತ್ತಿದೆ...ಇ೦ದು ಶ್ರೀದೇವರಿಗೆ "ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ.ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಜರಗಲಿದೆ....
ಚೆನ್ನಮ್ಮ ಉತ್ತರ ಕ್ರಿಯಾದಿ: ಸಮಾಧಿ ಮುಂದೆ ಪತ್ನಿ ನೆನೆದು ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡ
ಹಾಸನ: ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ.
ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಅವರ ಕುಟುಂಬದ ಬಹುತೇಕ ಎಲ್ಲಾ ಸದಸ್ಯರು, ಹಲವು ಗಣ್ಯರು ಹಾಗೂ ಸಾವಿರಾರು ಜನ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.
ಸಮಾಧಿ ಸ್ಥಳದಲ್ಲಿದ್ದ ಎಚ್ ಡಿ ದೇವೇಗೌಡ ಅವರು ಪತ್ನಿಯನ್ನು ನೆನದು ಭಾವುಕರಾದರು. ಇದಕ್ಕು ಮುನ್ನ ಹೊಳೆನರಸೀಪುರದ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ನಡೆದ ವಿಧಿ-ವಿಧಾನದ ವೇಳೆಯೂ ದೇವೇಗೌಡರು ಕಣ್ಣೀರಿಟ್ಟರು.
ಚೆನ್ನಮ್ಮ ಅವರ ಸಮಾಧಿಗೆ ಅವರ ನೆಚ್ಚಿನ ಮೈಸೂರು ಮಲ್ಲಿಗೆ ಹೂಗಳನ್ನು ಅರ್ಪಿಸಿದ ಎಚ್.ಡಿ. ದೇವೇಗೌಡರು, ಪೂಜೆ–ಪುನಸ್ಕಾರದಲ್ಲಿ ಕುಟುಂಬ ಸದಸ್ಯರೊಂದಿಗೆ ಭಾಗವಹಿಸಿದರು.
ಚೆನ್ನಮ್ಮ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ವಿ.ಸೋಮಣ್ಣ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ಸಾವಿರಾರು ಸಂಖ್ಯೆಯಲ್ಲಿ ನೆಂಟರು, ಬಂಧುಗಳು, ಜೆಡಿಎಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸರತಿ ಸಾಲಿನಲ್ಲಿ ಬಂದು ಸಮಾಧಿ ದರ್ಶನ ಪಡೆದರು.