..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....

ಉಡುಪಿ: ದ್ವೇಷದ ಭಾಷಣ ರಾವಣನಂತೆ ಬಿಂಬಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಕಟೌಟ್‌ಗೆ ಮೊಟ್ಟೆ ಎಸೆತ-ಪ್ರತಿಕೃತಿ ದಹಿಸಿ ಆಕ್ರೋಶ

ಉಡುಪಿ: ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಗರದ ಸರ್ವಿಸ್ ಬಸ್ ನಿಲ್ದಾಣದ ಜಡ್ಕ್ ಸ್ಟ್ಯಾ೦ಡ್ ನ ಎದುರು ಶುಕ್ರವಾರದ೦ದು ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಯಶ್‌ಪಾಲ್ ಸುವರ್ಣರನ್ನು 10 ತಲೆ ಹಾಗೂ ಎಂಟು ಕೈಗಳ ರಾವಣನಂತೆ ಬಿಂಬಿಸಿದ ಕಟೌಟ್ ಗಮನ ಸೆಳೆಯಿತು.

ಚಡ್ಡಿ ಧರಿಸಿರುವ ಯಶ್‌ಪಾಲ್, ಕೈಗಳಲ್ಲಿ ಮದ್ಯದ ಬಾಟಲಿ, ಐಸ್‌ಕ್ಯಾಂಡಿ, ಮೊಬೈಲ್, ಟವಲ್, ಜೋಕರ್ ಇಸ್ಪೀಟ್, ಮೆಲೋಡಿ ಚಾಕಟೇಲ್, ಚೊಂಬುಗಳನ್ನು ಹಿಡಿದುಕೊಂಡಿರುವಂತೆ ಕಟೌಟ್‌ನಲ್ಲಿ ಚಿತ್ರಿಸಲಾಗಿದೆ.

ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಈ ಕಟೌಟ್‌ಗೆ ಮೊಟ್ಟೆಗಳನ್ನು ಎಸೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಯಶ್‌ಪಾಲ್ ವಿರುದ್ಧ ಘೋಷಣೆ ಗಳನ್ನು ಕೂಗುತ್ತ ರಾವಣನಂತೆ ಬಿಂಬಿಸಲಾದ ಯಶ್‌ಪಾಲ್ ಸುವರ್ಣರ ಪ್ರತಿಕೃತಿಯನ್ನು ದಹಿಸಲಾಯಿತು.

No Comments

Leave A Comment