....ನಾಲ್ಕುದಿನಗಳ ಬ್ಯಾ೦ಕ್ ಬ೦ದ್...ಶ್ರೀಗೌರಿಗಣೇಶ ಹಬ್ಬಕ್ಕೆ ಭಕ್ತರಿ೦ದ ಸಕಲ ಸಿದ್ದತೆ...ಶ್ರೀಗಣೇಶ ವಿಗ್ರಹ ತಯಾರಿಕೆಯಲ್ಲಿ ತಲ್ಲೀನ ರಾಗಿರುವ ವಿಗ್ರಹ ರಚನೆಗಾರರು...

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಿಕ್ಷೆ ಅಮಾನತನಲ್ಲಿಟ್ಟು ಹೈಕೋರ್ಟ್ ಜಾಮೀನು ಮಂಜೂರು

ಬೆಂಗಳೂರು: ಧಾರವಾಡದ ಹೈಪ್ರೊಫೈಲ್ ಮರ್ಡರ್ ಕೇಸ್ ನಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣುಗೆ ಇಂದು ಶುಕ್ರವಾರ ಬಿಗ್ ರಿಲೀಫ್ ಸಿಕ್ಕಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದೆ.

ಪ್ರಕಕಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿ ತಮಗೆ ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಹೈಕೋರ್ಟ್ ಇಂದು ಮಹತ್ವದ ಮಧ್ಯಂತರ ತೀರ್ಪು ನೀಡಿದೆ.

10 ಮಂದಿಗೂ ಜಾಮೀನು

ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಚನ್ನಕೇಶವ ಟಿಂಗರಿಕರ್‌ಗೂ ಜಾಮೀನು ದೊರೆತಿದೆ.

ವಿನಯ್​ ಕುಲಕರ್ಣಿಗೆ ಬಿಗ್ ರಿಲೀಫ್​…

ವಿನಯ್​ ಕುಲಕರ್ಣಿಗೆ ಬಿಗ್​ ರಿಲೀಫ್​ ಸಿಕ್ಕಿದ್ದು, ಜೀವಾವದಿ ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದೆ. ಶಿಕ್ಷೆ ಅಮಾನತನಲ್ಲಿಟ್ಟು ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇರೆಗೆ ಜಾಮೀನು ನೀಡಲಾಗಿದೆ. ನ್ಯಾಯಮೂರ್ತಿ ಬಸವರಾಜ್ ಹಾಗೂ ಮೊಹಮ್ಮದ್ ನವಾಜ್ ಅವರ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ. ಇದರಿಂದ ಅವರ ಶಾಸಕ ಸ್ಥಾನಕ್ಕೆ ಮತ್ತೆ ಜೀವ ಸಿಕ್ಕಿದೆ.

ಜಾಮೀನಿನ ಪ್ರಮುಖ ಷರತ್ತುಗಳು

  • ಜಾಮೀನು ಮೊತ್ತ: 5 ಲಕ್ಷ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸಬೇಕು.

  • ನ್ಯಾಯಾಲಯದ ಕ್ರಮ: ವಿಭಾಗೀಯ ಪೀಠವು ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಮತ್ತು ದೋಷಾರೋಪಣೆಯ ಆದೇಶದ ಜಾರಿಗೆ ತಾತ್ಕಾಲಿಕ ತಡೆ ನೀಡಿದೆ.

  • ಧಾರವಾಡ ಪ್ರವೇಶ: ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸುವ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

  • ಹೈಕೋರ್ಟ್ ಅನುಮತಿ ಇಲ್ಲದೆ ಭಾರತದಿಂದ ಹೊರಗೆ ಪ್ರಯಾಣಕ್ಕೆ ಅವಕಾಶವಿಲ್ಲ.

2016ರ ಜೂನ್‌ನಲ್ಲಿ ಧಾರವಾಡದಲ್ಲಿ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆಯಾಗಿತ್ತು. ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದರ ಪರಿಣಾಮವಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹರಾಗಿದ್ದರು.

ಇದೀಗ ಹೈಕೋರ್ಟ್ ಶಿಕ್ಷೆ ಮತ್ತು ದೋಷಾರೋಪಣೆಯ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿ ಜಾಮೀನು ಮಂಜೂರು ಮಾಡಿರುವುದರಿಂದ, ವಿನಯ್ ಕುಲಕರ್ಣಿಗೆ ಅವರ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ಪೂರ್ಣಗೊಳ್ಳುವವರೆಗೆ ಮಧ್ಯಂತರ ಕಾನೂನು ಪರಿಹಾರ ದೊರೆತಿದೆ.

No Comments

Leave A Comment