..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....
ಕಾಶ್ಮೀರ CM ಒಮರ್ ಅಬ್ದುಲ್ಲಾಗೆ ಕೊನೆಗೂ ಸಿಕ್ತು ಪತ್ನಿ ಪಾಯಲ್ರಿಂದ ವಿಚ್ಛೇದನ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತಮ್ಮಿಂದ ಬೇರೆಯಾದ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ವಿಚ್ಛೇದನ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಶುಕ್ರವಾರ ಅವರಿಗೆ ಸುಪ್ರೀಂ ಕೋರ್ಟ್ ವಿಚ್ಛೇದನ ಮಂಜೂರು ಮಾಡಿದೆ.
ಈ ಹಿಂದೆ ಸುಪ್ರೀಂ ಕೋರ್ಟ್ ನಿಮ್ಮ ವೈವಾಹಿಕ ಸಮಸ್ಯೆಗಳನ್ನು ಒಟ್ಟಿಗೆ ಕುಳಿತು ಪರಿಹರಿಸಿಕೊಳ್ಳಲು ಯತ್ನಿಸುವಂತೆ ನಿರ್ದೇಶನ ನೀಡಿತ್ತು.
ಅದರಂತೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಅವರ ಪತ್ನಿ ಪಾಯಲ್ ಅಬ್ದುಲ್ಲಾ ಅವರು ಬೇರೆಯಾಗಲು ಒಪ್ಪಿಕೊಂಡಿದ್ದಾರೆ ಮತ್ತು ಪರಸ್ಪರ ಒಪ್ಪಿಗೆಯ ಮೇಲೆ ತಮ್ಮ ಮದುವೆಯನ್ನು ವಿಸರ್ಜಿಸುವಂತೆ ಕೋರಿ ಸಂವಿಧಾನದ 142ನೇ ವಿಧಿ ಅನ್ವಯಿಸಿ ಅರ್ಜಿ ಸಲ್ಲಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ತಿಳಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.
ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನೊಳಗೊಂಡ ಪೀಠದ ಮುಂದೆ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, “ಇಬ್ಬರೂ ಸಮ್ಮತಿಯಿಂದ ಬೆರೆಯಾಗಲು ನಿರ್ಧರಿಸಿದ್ದು, ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲಿದ್ದಾರೆ. ಸಂವಿಧಾನದ ವಿಧಿ 142ರ ಅಡಿಯಲ್ಲಿ ವಿಚ್ಛೇದನ ಮಂಜೂರು ಮಾಡಬೇಕು” ಎಂದು ಮನವಿ ಮಾಡಿದರು. ಹೀಗಾಗಿ ಕೋರ್ಟ್ ಈ ಇಬ್ಬರಿಗೂ ವಿಚ್ಛೇದನ ನೀಡಿದೆ.
ಜುಲೈ 22 ರಂದು ವಿಚ್ಛೇದನ ಅರ್ಜಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಲಾಯಿತು. ಇದನ್ನು ಕೇಳಿದ ನ್ಯಾಯಮೂರ್ತಿ ನರಸಿಂಹ ಅವರು, ನ್ಯಾಯಾಲಯವು ಅದಕ್ಕೆ ಅನುಗುಣವಾಗಿ ಆದೇಶಗಳನ್ನು ನೀಡಲಿದೆ ಎಂದು ಹೇಳಿದರು.
15 ವರ್ಷಗಳಿಂದ ಪತ್ನಿಯಿಂದ ದೂರ ಇರುವ ಒಮರ್ ಅಬ್ದುಲ್ಲಾ ಅವರಿಗೆ ವಿಚ್ಛೇದನ ನೀಡಲು 2016 ರಲ್ಲಿ ಕೌಟುಂಬಿಕ ನ್ಯಾಯಾಲಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರ ಸಿಎಂ ಸಲ್ಲಿಸಿದ್ದ ಮೇಲ್ಮನವಿಯನ್ನು ಡಿಸೆಂಬರ್ 12, 2023 ರಂದು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.