..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...
ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದಾಗ Mahindra Thar ಕಾರು ಪಲ್ಟಿ, ಇಬ್ಬರ ಸಾವು, ಮೂವರು ಗಂಭೀರ
ಬೆಂಗಳೂರು: ಸ್ನೇಹಿತನ ಬರ್ತ್ ಡೇ ಪಾರ್ಟಿ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಮಹಿಂದ್ರಾ ಥಾರ್ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹೊರವಲಯದ ನೆಲಮಂಗಲದ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಥಾರ್ ಕಾರು ಪಲ್ಟಿಯಾಗಿದ್ದು, ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಪವನ್ ಮತ್ತು ದೀಪಕ್ ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕೆರೆಯ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಥಾರ್ ಜೀಪ್ ಗದ್ದೆಗೆ ಬಿದ್ದಿದೆ.
ರಸ್ತೆಯಿಂದ ನಾಲ್ಕೈದು ಬಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೇಗವೇ ಅಪಘಾತಕ್ಕೆ ಕಾರಣ?
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತಕ್ಕೆ ಅತೀ ವೇಗವೂ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತನಿಖೆಯ ಬಳಿಕವೇ ತಿಳಿಯಲಿದೆ. ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.