..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ‘ಗಂಗಾ ಸಾಮ್ರಾಜ್ಯದ ಅನಾವರಣ’: ಸಿಎಂ ಡಿಕೆ ಶಿವಕುಮಾರ್ ಚಾಲನೆ
ಬೆಂಗಳೂರು: ಐತಿಹಾಸಿಕ ಲಾಲ್ ಬಾಗ್ ನಲ್ಲಿ ಹೂಗಳಿಂದ ಗಂಗರ ಸಾಮ್ರಾಜ್ಯದ ಇತಿಹಾಸ ಅನಾವರಣಗೊಂಡಿದೆ.
ಸ್ವಾತಂತ್ರ್ಯೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ವಿಷಯಾಧಾರಿತ ‘ಗಂಗ ಸಾಮ್ರಾಜ್ಯ ವೈಭವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಇದಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ಬಳಿಕ ಗಂಗರಸರ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಪ್ರದರ್ಶನ ವೀಕ್ಷಿಸಿದರು.
ಈ ವರ್ಷದ ಪ್ಲವರ್ ಶೋನಲ್ಲಿ ಗಂಗ ಸಾಮ್ರಾಜ್ಯದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಹೂವುಗಳು ಹಾಗೂ ಸಸ್ಯಗಳಿಂದ ಅನಾವರಣಗೊಳಿಸಲಾಗಿದೆ. ಬಣ್ಣ ಬಣ್ಣದ ಹೂವಿನ ಕಲಾಕೃತಿಗಳು ಮತ್ತು ವಿಶೇಷ ಥೀಮ್ ಪ್ರದರ್ಶನಗಳು ಪ್ರವಾಸಿಗರು ಮತ್ತು ಪ್ರಕೃತಿ ಪ್ರಿಯರನ್ನು ಆಕರ್ಷಿಸುತ್ತಿವೆ.
ಈ ವೇಳೆ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಎಲ್ಲರೂ ಕುಟುಂಬಸಮೇತ ಬಂದು, ಗಂಗರ ಸಾಮ್ರಾಜ್ಯದ ಇತಿಹಾಸವನ್ನು ಕಣ್ತುಂಬಿಕೊಳ್ಳಬೇಕು ಹಾಗೂ ಈ ಅವಕಾಶವನ್ನು ಯಾರೂ ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.