..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹೊರಟ್ಟಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

75 ಸದಸ್ಯ ಬಲದ ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ, ಸಭಾಪತಿ ಮತ್ತು ಉಪಸಭಾಪತಿ ಎರಡೂ ಹುದ್ದೆಗಳನ್ನು ತನ್ನ ವಶಕ್ಕೆ ಪಡೆಯಲು ಆಡಳಿತಾರೂಢ ಕಾಂಗ್ರೆಸ್ ಮುಂದಾಗಿದೆ. ಈ ರಾಜಕೀಯ ಬೆಳವಣಿಗೆಯ ನಡುವೆಯೇ ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು.

ಈಗ ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

No Comments

Leave A Comment