..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ಬಳ್ಳಾರಿಯಲ್ಲಿ ಭೀಕರ ಅಪಘಾತ: ಪಾದಾಚಾರಿಗಳ ಮೇಲೆ ಹರಿದು ಪಲ್ಟಿಯಾದ ಮೈನಿಂಗ್‌ ಲಾರಿ; ಇಬ್ಬರು ದುರ್ಮರಣ

ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ಶುಕ್ರವಾರ ಮೈನಿಂಗ್ ಲಾರಿಯೊಂದು ಹರಿದು ಇಬ್ಬರು ಪಾದಾಚಾರಿಗಳ ಮೇಲೆ ಹರಿದು ಬಳಿಕ ಪಲ್ಟಿಯಾಗಿದ್ದು, ಭೀಕರ ಅಪಘಾತಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ.

ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಹಿಂಬದಿಯಿಂದ ಬಂದ ಲಾರಿ ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ.

ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಈ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment