ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಉಡುಪಿ: ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಿಇಓ ಆತ್ಮಹತ್ಯೆ

ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್‌ ಮೆಡೋಸ್‌ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ( 44) ಎಂದು ಗುರುತಿಸಲಾಗಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆ ಕುರಿತು ಮಾಹಿತಿ ಪಡೆದ ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತನಿಖೆ ಮುಂದುವರಿದಿದೆ.

No Comments

Leave A Comment