....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು

ರಾಜ್‌ಗಢ: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, 11 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಊದಿಕೊಂಡ ನಲ್ಲಾ(ಚರಂಡಿ) ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿಹೋಗಿದೆ. ಪರಿಣಾಮ ಒಬ್ಬ ಹುಡುಗಿ ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರಂಗಪುರ ಪಟ್ಟಣದ ಬಳಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಾನ್ ಚಾಲಕ, ಪದಾನ ಬೈಪಾಸ್ ಕಲ್ವರ್ಟ್ ಮೂಲಕ ಹೋಗಲು ಪ್ರಯತ್ನಿಸುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದೆ. ಘಟನೆಯ ನಂತರ ವ್ಯಾನ್‌ನಲ್ಲಿದ್ದ ಇಬ್ಬರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಥಳೀಯ ಆಡಳಿತ ಮತ್ತು ಸ್ಥಳದಲ್ಲಿದ್ದ ಗ್ರಾಮಸ್ಥರು ಚಾಲಕನಿಗೆ ಮುಂದೆ ಹೋಗದಂತೆ ಎಚ್ಚರಿಕೆ ನೀಡಿದ್ದರು. ಆದರೂ ಚಾಲಕ ಪದಾನ ಬೈಪಾಸ್ ದಾಟಲು ಯತ್ನಿಸಿದ್ದು, ಪ್ರವಾಹಕ್ಕೆ ಸಿಲುಕಿ ವ್ಯಾನ್ ನೀರಿನಲ್ಲಿ ಕೊಚ್ಚಿ ಹೋಗಿದೆ.

ಗ್ರಾಮಸ್ಥರು, ತಮ್ಮ ಪ್ರಾಣವನ್ನು ಪಣಕ್ಕಿಟ್ಟು, ಹಗ್ಗಗಳನ್ನು ಕಟ್ಟಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಕೆಲವು ಪ್ರಯಾಣಿಕರನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು ಎಂದು ಅವರು ಹೇಳಿದ್ದಾರೆ.

ಒಬ್ಬ ಹುಡುಗಿ ಸೇರಿದಂತೆ ಒಂಬತ್ತು ಜನರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment