ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಜೈಲಿನಲ್ಲಿದ್ದರೂ ಬಿಡದ ಚಟ: ಮಾಜಿ JDS ಸಂಸದ ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ ಅಶ್ಲೀಲ ಫೋಟೋ, ವಿಡಿಯೋ ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾಗಿದ್ದು ಇದೀಗ ಆಘಾತಕಾರಿ ಮಾಹಿತಿಗಳು ಹೊರಬರುತ್ತಿವೆ.

ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು, ಪತ್ರಿಕೆಯಲ್ಲಿನ ಯುವತಿಯರ ಅಶ್ಲೀಲ ಫೋಟೋಗಳ ಕಟಿಂಗ್ ಗಳು ಪತ್ತೆಯಾಗಿವೆ. ಹೀಗಾಗಿ ಪ್ರಜ್ವಲ್ ರೇವಣ್ಣನನ್ನು VIP ಸೆಲ್​​​​ನಿಂದ ಜನರಲ್ ಸೆಲ್​​​​ಗೆ ಸ್ಥಳಾಂತರ ಮಾಡಲಾಗಿದೆ. ಪರಿಶೀಲನೆ ವೇಳೆ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ರೆಡ್ ಮಿ ಮೊಬೈಲ್ ಮತ್ತು ಚಾರ್ಜರ್, ಪೆನ್ ಡ್ರೈವ್ ಮತ್ತು ಪಾಕೆಟ್ ನೋಟ್ ಬುಕ್ ಪತ್ತೆಯಾಗಿವೆ.

ವಿಚಾರಣೆಯ ಸಮಯದಲ್ಲಿ, ನೋಟ್‌ಬುಕ್ ತನಗೆ ಸೇರಿದ್ದು ಎಂದು ಪ್ರಜ್ವಲ್ ಅಧಿಕಾರಿಗಳಿಗೆ ಹೇಳಿದ್ದಾನೆ. ಪ್ರತಾಪ್ ರೈ ಮೊಬೈಲ್ ಫೋನ್, ಚಾರ್ಜರ್ ಮತ್ತು ಪೆನ್ ಡ್ರೈವ್‌ ತನ್ನದು ಎಂದು ಹೇಳಿಕೊಂಡಿದ್ದಾನೆ. ತನ್ನ ಸಂಬಂಧಿಕರು ಮತ್ತು ವಕೀಲರನ್ನು ಸಂಪರ್ಕಿಸಲು ಈ ಫೋನ್ ಬಳಸುತ್ತಿದ್ದನೆಂದು ಹೇಳಿದ್ದಾನೆ. ಹೀಗಾಗಿ ವಿಚಾರಣಾಧೀನ ಕೈದಿ ಪ್ರತಾಪ್ ರೈ ವಿರುದ್ಧ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ

No Comments

Leave A Comment