.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಎರ್ಮಾಳ್ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು.
ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಿದಾಗ ಚಿರಾಗ್ ಪೂಜಾರಿ ಹಾಗೂ ಮೊಹಮ್ಮದ್ ಇರ್ಷಾದ್ ಎಂಬವರು ಕೃತ್ಯ ನಡೆಸಲು ಹಣ ವರ್ಗಾವಣೆ ಮಾಡಲು ಸಹಾಯ ಮಾಡಿರುವುದು ಕಂಡುಬಂದಿದೆ. ಅದರಂತೆ ಇವರಿಬ್ಬರನ್ನು ಆ.12ರಂದು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ.