....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಕಾಸರಗೋಡು: ಡಿಸೆಂಬರ್‌ನಲ್ಲಿ ವಿವಾಹವಾಗಬೇಕಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕಾಸರಗೋಡು:ಆ.12,ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಕಾಸರಗೋಡಿನ 25 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬರು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ತಮ್ಮ ಬಾಡಿಗೆ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯುವತಿಯ ದಿಢೀರ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ.

ಮೃತರನ್ನು ಕಾಸರಗೋಡು ಜಿಲ್ಲೆಯ ಪೂಚಕ್ಕಾಡ್ ನಿವಾಸಿಗಳಾದ ಕೆ. ಚಂದ್ರನ್ ಮತ್ತು ರೀನಾ ದಂಪತಿಯ ಪುತ್ರಿ ಪಿ. ಅನುಶ್ರೀ ಎಂದು ಗುರುತಿಸಲಾಗಿದೆ. ಅವರು ಹುಣಸೂರಿನ ಸ್ಥಳೀಯ ಬ್ಯಾಂಕ್ ಶಾಖೆಯೊಂದರಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅನುಶ್ರೀ ಅವರ ವಿವಾಹವು ಇದೇ ವರ್ಷದ ಡಿಸೆಂಬರ್ 26ರಂದು ನಿಗದಿಯಾಗಿತ್ತು. ಮದುವೆಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅನುಶ್ರೀ ಅವರ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮದುವೆಯ ಸಿದ್ಧತೆಗಳು ಯಾವುದೇ ತೊಂದರೆಯಿಲ್ಲದೆ ಸಾಗುತ್ತಿದ್ದವು. ಹೀಗಿರುವಾಗ ಅವರು ಇಂತಹ ನಿರ್ಧಾರ ಕೈಗೊಂಡಿರುವುದು ಎಲ್ಲರಿಗೂ ಅಚ್ಚರಿ ಹಾಗೂ ಬೇಸವನ್ನುಂಟು ಮಾಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸದ್ಯಕ್ಕೆ ಅನುಶ್ರೀ ಅವರ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಜ್ಞರಿಂದಲೂ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

No Comments

Leave A Comment