.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಚಿತ್ರದುರ್ಗ: ಪ್ರವಾಸಿ ಬಸ್ ಪಲ್ಟಿಯಾಗಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಜನರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಹಿರಿಯೂರಿನ ಐಮಂಗಲ ಬಳಿ ಈ ಅಪಘಾತ ಸಂಭವಿಸಿದೆ.

ಮೃತರು ಬೆಂಗಳೂರಿನ ಯೂನಿವರ್ಸಲ್ ಕಾಲೇಜಿನ ಮೂರನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು. ವಿದ್ಯಾರ್ಥಿಗಳು ಆಗಸ್ಟ್ 16ರಂದು ಪ್ರವಾಸಕ್ಕಾಗಿ ಗೋವಾಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಗೋವಾದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಶುಕ್ರವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಇತರ 20 ಜನರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ANI ಜೊತೆ ಮಾತನಾಡಿದ ಗಾಯಗೊಂಡ ವಿದ್ಯಾರ್ಥಿಯೊಬ್ಬರು, ರಾತ್ರಿ 10:30 ರ ಸುಮಾರಿಗೆ ಎಲ್ಲರೂ ನಿದ್ರೆಗೆ ಜಾರಿದರು. ಇದ್ದಕ್ಕಿದ್ದಂತೆ, ನಮಗೆ ಬಸ್ ಡಿಕ್ಕಿ ಹೊಡೆದ ಅನುಭವವಾಯಿತು, ಮತ್ತು ಎಲ್ಲರೂ ಕೂಗಲು ಪ್ರಾರಂಭಿಸಿದರು” ಎಂದು ಹೇಳಿದರು.

ಸ್ಥಳಕ್ಕೆ ಬಂದ ಜನರು ಬಸ್ಸಿನ ಕಿಟಕಿಗಳನ್ನು ಒಡೆದು ಒಳಗೆ ಸಿಲುಕಿಕೊಂಡಿದ್ದವರನ್ನು ಹೊರಗೆ ತರಲು ಸಹಾಯ ಮಾಡಿದರು ಎಂದು ವಿದ್ಯಾರ್ಥಿ ತಿಳಿಸಿದರು.

ಗಾಯಗೊಂಡ ವಿದ್ಯಾರ್ಥಿಯ ಪ್ರಕಾರ, ಬಸ್ಸಿನಲ್ಲಿ 49 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು, ಅವರ ಜೊತೆಗೆ ಇಬ್ಬರು ಬೋಧಕ ಸಿಬ್ಬಂದಿ ಮತ್ತು ಒಬ್ಬ ಬೋಧಕೇತರ ಸಿಬ್ಬಂದಿ ಇದ್ದರು.

No Comments

Leave A Comment