..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...
ಸೆ. 4ರಂದು ಕೃಷ್ಣಾಷ್ಟಮಿ; ಸೆ.5ರಂದು ವಿಟ್ಲಪಿಂಡಿ ಉತ್ಸವ
ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಸೆ. 5ರಂದು ಬೆಳಿಗ್ಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ರಾಜಾಂಗಣದಲ್ಲಿ ಹುಲಿವೇಷ ಕುಣಿತ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.
ಅಂದು ಮಧ್ಯಾಹ್ನ 3.30ಕ್ಕೆ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೃಣ್ಮಯ ವಿಗ್ರಹದ ಮೆರವಣಿಗೆ ನಡೆಯಲಿದೆ. ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವದ ಅಂಗವಾಗಿ ರಥಬೀದಿಯ ವಿಶೇಷ ವೇದಿಕೆಯಲ್ಲಿ ಆಹ್ವಾನಿತ ಮಲ್ಲಯುದ್ಧ ಪ್ರವೀಣರಿಂದ ಮಲ್ಲಯುದ್ಧ ಪ್ರದರ್ಶನ ನಡೆಯಲಿದ್ದು, ಇದು ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಲಿದೆ ಎಂದು ಹೇಳಿದರು.
ಅಷ್ಟಮಿ ವಿಟ್ಲಪಿಂಡಿ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ವಿಶೇಷ ವೇದಿಕೆಯಲ್ಲಿ ಹುಲಿವೇಷ ಸ್ಪರ್ಧೆ ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದ ಕಲಾವಿದರಿಂದ ಕಲಾ ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದರು.
ಸೆ. 6ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಅಷ್ಟಮಂಗಲ ಪ್ರಶ್ನೆಯ ಅನುಸಾರದಂತೆ ಅಂದು ಕೋಟಿ ತುಳಸಿ ಅರ್ಚನೆ ಕೈಗೊಳ್ಳಲಾಗಿದೆ ಎಂದು ಶಿರೂರು ಶ್ರೀಗಳು ತಿಳಿಸಿದರು.
ಭಕ್ತಿ, ಧಾರ್ಮಿಕ ಆಚರಣೆ, ಸಾಂಸ್ಕೃತಿಕ ವೈಭವ ಹಾಗೂ ಜನಪದ ಕಲಾ ಪ್ರದರ್ಶನಗಳ ಸಮ್ಮಿಲನದೊಂದಿಗೆ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವವನ್ನು ವೈಭವೋಪೇತವಾಗಿ ಆಚರಿಸಲು ಸಿದ್ಧತೆ ನಡೆದಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಠದ ದಿವಾನ ಉದಯಕುಮಾರ್ ಸರಳ್ತಾಯ ಉಪಸ್ಥಿತರಿದ್ದರು.